Site icon Suddi Belthangady

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

ಬೆಳ್ತಂಗಡಿ: 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿ, ರಾಜ್ಯಕ್ಕೆ 2ನೇ ಸ್ಥಾನ ಗಳಿಸಿರುವ ಬೆಳ್ತಂಗಡಿಯ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ಯನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ. ಕ ಜಿಲ್ಲಾ ಸಮಿತಿ ವತಿಯಿಂದ ಬೆಳ್ತಂಗಡಿಯ ವಿದ್ಯಾರ್ಥಿಯ ಮನೆಗೇ ತೆರಳಿ ಸನ್ಮಾನಿಸಲಾಯಿತು.

ಪಕ್ಷದ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಕಾರ್ಯಕ್ರಮ ಸಂಯೋಜಿಸಲ್ಪಟ್ಟಿತು. ಸಾಧಕ ವಿದ್ಯಾರ್ಥಿಗೆ ಶಾಲು ಹೊದಿಸಿ ಹೂಗುಚ್ಛ ನೀಡಿ ಗೌರವ ಸಮರ್ಪಿಸಲಾಯಿತು.

ವಿದ್ಯಾರ್ಥಿ ಚಿನ್ಮಯಿ ಅವರ ತಂದೆ ಬೆಳ್ತಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಗಣೇಶ್ ಭಟ್ ರವರು ಉಪಸ್ಥಿತರಿದ್ದರು. ಈ ವೇಳೆ ವಿದ್ಯಾರ್ಥಿಯ ಹೆತ್ತವರಿಗೆ, ಸಾಧನೆಗೆ ಬೆಂಬಲವಾಗಿ ನಿಂತ ಶಾಲೆಯ ಶಿಕ್ಷಕರು ಮತ್ತು ಪೋಷಕರ ಬಗ್ಗೆ SDPI ನಾಯಕರು ಅಭಿನಂದನೆ ಸಲ್ಲಿಸಿ ಶಾಲೆಗೆ, ನಾಡಿಗೆ ಗೌರವ ತಂದ ಚಿನ್ಮಯನ ಭವಿಷ್ಯ ಉಜ್ವಲ ವಾಗಿ, ಮುಂದಿನ ವಿದ್ಯಾಭ್ಯಾಸದಲ್ಲಿ ಇದೇ ರೀತಿಯ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಧ್ಯಕ್ಷ ನವಾಝ್ ಕಟ್ಟೆ, ಮುಖಂಡರಾದ ರಶೀದ್ ಬೆಳ್ತಂಗಡಿ, ಅಶ್ರಫ್ ಕಟ್ಟೆ, ಉಪಸ್ಥಿತರಿದ್ದರು.

Exit mobile version