ಬೆಳ್ತಂಗಡಿ: ಮಾಲಾಡಿ ಗ್ರಾಮದ ಕೊಲ್ಪೆದಬೈಲು ನಿವಾಸಿ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಮೃತ ವ್ಯಕ್ತಿ ಸ್ಥಳೀಯ ನಿವಾಸಿ ವಲೇರಿಯನ್ ಡಿ’ಸೋಜ(77 ವರ್ಷ) ಎಂಬವರಾಗಿದ್ದಾರೆ.
ಈ ಬಗ್ಗೆ ಮೃತರ ಪತ್ನಿ ಪುಂಜಾಲಕಟ್ಟೆ ಪೊಲೀಸರಿಗೆ ದೂರು ನೀಡಿದ್ದು, ಕಳೆದ ಕೆಲದಿನಗಳಿಂದ ವಲೇರಿಯನ್ ಡಿಸೋಜ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಮೇ 15ರಂದು ಮನೆಯಲ್ಲ ಯಾರೂ ಇಲ್ಲದ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.
ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
p>