ಗುರುವಾಯನಕೆರೆ: ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಸಿ.ಬಿ.ಎಸ್.ಸಿ ಹತ್ತನೇ ತರಗತಿ ಪರೀಕ್ಷೆಯಲ್ಲಿ ತಾಲೂಕಿಗೆ ಟಾಪರ್ ಆದ ಅಕ್ಷಯ್.ಎ ರಿಗೆ ಗೌರವ

0

ಬೆಳ್ತಂಗಡಿ: ಸಿ.ಬಿ.ಎಸ್.ಸಿ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ತಾಲೂಕಿಗೆ ಟಾಪರ್ ಆದ ಅಕ್ಷಯ್ ಎ ಗೆ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಗೌರವ ಸಲ್ಲಿಸಲಾಯಿತು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಅಕ್ಷಯ್ ಗೆ ಶಾಲು ಹೊದಿಸಿ, ಹಾರ ಹಾಕಿ, ಪೇಟಾ ತೊಡಿಸಿ ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಅಕ್ಷಯ್ ನ ತಂದೆ ಶೇಖರ್ ಗೌಡ , ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ, ಆಡಳಿತಾಧಿಕಾರಿ ಕೀರ್ತಿನಿಧಿ, ಸಾರ್ವಜನಿಕ ಸಂಪರ್ಕಾಧಿಕಾರಿ ರಿಚರ್ಡ್ ಜೀವನ್ ಮೊರಸ್, ವಾಣಿಜ್ಯ ವಿಭಾಗದ ಡೀನ್ ಸಂತೋಷ್, ವಿಭಾಗ ಮುಖ್ಯಸ್ಥರಾದ ಪ್ರಸನ್ನ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here