ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮಾ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಕುರಿತಂತೆ ಶಿಕ್ಷಣ ಸಂವಹನ ಮಾಹಿತಿ ಕಾರ್ಯಕ್ರಮ ಪಂಚಾಯತ್ ಅಧ್ಯಕ್ಷ ಯಶವಂತ ರವರ ಅಧ್ಯಕ್ಷತೆಯಲ್ಲಿ ಜರಗಿತು.
ಮಾನ್ಯ ಕಾರ್ಯನಿರ್ವಹಣಾಧಿಕಾರಿ ವೈಜಣ್ಣನವರು ನರೇಗಾ ಫಲಾನುಭವಿಗಳೊಂದಿಗೆ, ನರೇಗಾ ಯೋಜನೆ ಕುರಿತು ಚರ್ಚಿಸಿ, ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ರೈತರಿಗೆ ಮಾಹಿತಿ ನೀಡಲಾಯಿತು.
ಉಪಾಧ್ಯಕ್ಷೆ ಜಾನಕಿ ಹಾಗೂ ಸದಸ್ಯರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸಂತೋಷ ಪಾಟೀಲ್ ಸ್ವಾಗತಿಸಿದರು.
ತಾಂತ್ರಿಕ ಸಹಾಯಕ ಅಭಿಯಂತರರು ಶರಣ್ ರೈ, ತಾಲೂಕು ನರೇಗಾ ಐಇಸಿ ಸಂಯೋಜಕಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳಾದ ಪ್ರದೀಪ್ ನಾಯ್ಕ, ಉಮೇಶ್, ಗ್ರಂಥಾಲಯ ಮೇಲ್ವಿಚಾರಕಿ ರೇವತಿ, ಸಂಜೀವಿನಿ ಯಂ.ಬಿ.ಕೆ ಲೋಕಮ್ಮ ಉಪಸ್ಥಿತರಿದ್ದರು.
ಕಾರ್ಯದರ್ಶಿ ರಮೇಶ್.ಕೆ ಧನ್ಯವಾದ ಸಲ್ಲಿಸಿದರು.