Site icon Suddi Belthangady

ತೆಂಕಕಾರಂದೂರು: ಗುಂಡೇರಿಯಲ್ಲಿ ಕಾರು ಅಪಘಾತ

ತೆಂಕಕಾರಂದೂರು: ತೆಂಕಕಾರಂದೂರು ಗ್ರಾಮದ ಗುಂಡೇರಿ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.

ಹುಬ್ಬಳ್ಳಿ ಮೂಲದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಗೆ ಚಲಿಸಿ ಬರೆಗೆ ಡಿಕ್ಕಿಹೊಡೆದು ಪಲ್ಟಿಯಾಗಿದೆ.

ಕಾರಿನಲ್ಲಿದ್ದ ಐದು ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಕಾರಿನಲ್ಲಿದ್ದ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರಿನಲ್ಲಿದ್ದ ಇತರ ಎಲ್ಲರಿಗೂ ಗಾಯಗಳಾಗಿದ್ದು ಸ್ಥಳೀಯರ ಸಹಕಾರದೊಂದಿಗೆ ಎಲ್ಲರನ್ನೂ ಆಸ್ಪತ್ರೆ ದಾಖಲಿಸಲಾಗಿದೆ. ಅಪಘಾತ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

Exit mobile version