ಬೆಳ್ತಂಗಡಿ: ಅಕ್ರಮ ಕಲ್ಲುಗಣಿಗಾರಿಕೆ ಪ್ರಕರಣಕ್ಕೆಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಪ್ರವೇಶಿಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ, ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಸದ್ರಿ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ, ಅಪಾಯಕಾರಿ ಸ್ಪೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮೋದ್ ಉಜಿರೆ ಹಾಗೂ ಶಶಿರಾಜ್ ಶೆಟ್ಟಿ (35) ಎಂಬವರುಗಳ ವಿರುದ್ಧ, ಬೆಳ್ತಂಗಡಿ ಠಾಣೆಯಲ್ಲಿ ದಿನಾಂಕ 18.05.2024 ಅ.ಕ್ರ:56/2024, 0: 9B(1)(b) Explosive act 1884 0 5 The Explosives Substance Act-1908 ರಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪೈಕಿ ಶಶಿರಾಜ್ ಶೆಟ್ಟಿ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಶಶಿರಾಜ್ ಪರವಾಗಿ, ಬೆಳ್ತಂಗಡಿ ವಿಧಾನಸಭಾ ಶಾಸಕರಾದ ಹರೀಶ್ ಪೂಂಜಾ ರವರು ಇತರ ಕೆಲವು ಜನರೊಂದಿಗೆ, ದಿನಾಂಕ ಮೇ.18 ರಂದು ರಾತ್ರಿ, ಬೆಳ್ತಂಗಡಿ ಠಾಣೆಗೆ ಭೇಟಿ ನೀಡಿ, ಆತನನ್ನು ಬಿಡುಗಡೆ ಮಾಡುವಂತೆ ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ, ಅವ್ಯಾಚವಾಗಿ ಬೈದು ಬೆದರಿಸಿರುತ್ತಾರೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ಇಲಾಖೆಯ ಬಗ್ಗೆ ಮತ್ತು ಪೊಲೀಸ್ ಅಧಿಕಾರಿಗಳ ಬಗ್ಗೆ ಅಸಂವಿಧಾನಿಕ ಶಬ್ದಗಳಲ್ಲಿ ಮಾತನಾಡಿ, ದುರ್ವತ್ರನೆ ತೋರಿರುತ್ತಾರೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಶಾಸಕರಾದ ಹರೀಶ್ ಪೂಂಜಾ ರವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ. 57/2024, ಕಲಂ :353, 504 ಐಟಿಸಿ ರಂತೆ ಪ್ರಕರಣ ದಾಖಲಾಗಿದೆ.