Site icon Suddi Belthangady

ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ- ಪರಿವಾರ ದೈವಗಳಿಗೆ ನೇಮೋತ್ಸವ

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಮೇ 20ರಂದು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಬೆಳಿಗ್ಗೆ ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಮಹಾಪೂಜೆ, ಕುಮಾರಾದಿ ದೈವಗಳಿಗೆ ನೇಮ, ರಾತ್ರಿ ಗೋಪುರದ ಬಾಗಿಲಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳಿಗೆ ನೇಮ, ವರ್ಷಾವಧಿ ಕಟ್ಟೆಯ ಬಳಿ ದೈವಗಳ ನೇಮೋತ್ಸವ ನಡೆಯಿತು.

ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ದಿನೇಶ್ ಎಂ., ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ ಮೂಡೆತ್ತಾಯ, ಮಾಜಿ ಸದಸ್ಯರುಗಳು, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಆನಂದ ಪೂಜಾರಿ, ಅರ್ಚಕರು ಹಾಗೂ ಊರವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Exit mobile version