Site icon Suddi Belthangady

ಬೆಳ್ತಂಗಡಿ: ಶ್ರೀ ಕ್ಷೇತ್ರ ಧ.ಗ್ರಾ.ಯೋ. ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದ ವಾರ್ಷಿಕ ವರದಿ ಬಿಡುಗಡೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಗ್ರಾಮೀಣ ಶ್ರೇಷ್ಠತಾ ಕೇಂದ್ರದ 2023-24ನೇ ಸಾಲಿನ ವಾರ್ಷಿಕ ವರದಿಯನ್ನು ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ವಿ. ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

ತರಬೇತಿ ಸಂಸ್ಥೆಯ ಎಲ್ಲಾ ಚಟುವಟಿಕೆಗಳ ವರದಿಗಳನ್ನು ಗಮನಿಸಿ ಹೆಗ್ಗಡೆ ದಂಪತಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ವರ್ಷದ ತರಬೇತಿಗಳ ಬಗ್ಗೆ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ತರಬೇತಿ ಸಂಸ್ಥೆಯು ಕಳೆದ 2023-24 ನೇ ಸಾಲಿನಲ್ಲಿ 5052 ಶಿಬಿರಾರ್ಥಿಗಳಿಗೆ ವಿವಿಧ ರೀತಿಯಲ್ಲಿ ಸಾಮರ್ಥ್ಯಾಭಿವೃದ್ಧಿ ತರಬೇತಿ, ಕೌಶಲ್ಯಾಭಿವೃದ್ಧಿ ತರಬೇತಿ, ಭಡ್ತಿ ತರಬೇತಿ, ಸಿರಿ ಸಂಸ್ಥೆಯ ಸಿಬ್ಬಂದಿಗಳಿಗೆ ತರಬೇತಿ, ಕಂಪ್ಯೂಟರ್ ತರಬೇತಿ, ಟೈಲರಿಂಗ್ ತರಬೇತಿ, ಸಾರಿಗೊಂಡೆ, ಬ್ರೌಸ್ ಡಿಸೈನ್, ಮೆಹಂದಿ ಡಿಸೈನ್, ಬಟ್ಟೆ ಚೀಲ ತರಬೇತಿ ಇತ್ಯಾದಿ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ.

ಕಳೆದ ವರ್ಷ ದ.ಕ. ಜಿಲ್ಲಾ ಪಂಚಾಯತ್‌ವತಿಯಿಂದ ಸರ್ಕಾರದ ನೂತನ ಯೋಜನೆ ‘ಕೂಸಿನ ಮನೆ’ ಈ ತರಬೇತಿಯನ್ನು ನಡೆಸಲಾಗಿದ್ದು, ಜಿಲ್ಲಾ ಪಂಚಾಯತ್ ಸಿ.ಇ.ಒ ಡಾ.ಆನಂದ್, ಬೆಳ್ತಂಗಡಿ ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ರವರು ಭೇಟಿ ತರಬೇತಿ ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ.

ಪ್ರಸಕ್ತ ವರ್ಷ ಇನ್ನೂ ಹೆಚ್ಚಿನ ತರಬೇತಿಯನ್ನು ನಡೆಸುವ ಗುರಿಯನ್ನು ತರಬೇತಿ ಸಂಸ್ಥೆಯು ಹೊಂದಿದೆ.

Exit mobile version