ತಣ್ಣೀರುಪಂತ ವಿಶೇಷ ಗ್ರಾಮ ಸಭೆ

0

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್‌ನ 2023-24ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ 15ನೇ ಹಣಕಾಸು ಯೋಜನೆಯ ಪ್ರಥಮ ಹಾಗೂ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ವಿಶೇಷ ಗ್ರಾಮ ಸಭೆಯನ್ನು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಸದ್ರಿ ಸಭೆಯ ಅಧ್ಯಕ್ಷತೆಯನ್ನು ಮದ್ದಡ್ಕ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಎಚ್ ಎನ್ ವಹಸಿದ್ದರು. ಸಭೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯಡಿ ಕೈಗೊಂಡ ವಿವಿಧ ಕಾಮಗಾರಿಗಳ ವರದಿಯನ್ನು ಮಂಡಿಸಿ ಅನುಮೋದನೆ ಪಡೆಯಲಾಯಿತು.

ನರೇಗಾ ಯೋಜನೆಯ ಕುರಿತು ವಿವಿಧ ಮಾಹಿತಿಯನ್ನು ಸಾಮಾಜಿಕ ಪರಿಶೋಧನೆಯ ತಾಲೂಕು ಸಂಯೋಜಕ ರಾಜೀವ್ ಸಾಲಿಯಾನ್ ತಿಳಿಸಿದರು.

ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಪುಂಜಾಳ ಬಳಿ ತೋಡಿನ ಹೂಳೆತ್ತುವ ಕಾಮಗಾರಿಯನ್ನು ನಿರ್ವಹಿಸಿದ ಲಕ್ಷ್ಮೀ ಸ್ವಸಹಾಯ ಸಂಘದ 19 ಮಹಿಳಾ ಸದಸ್ಯರಿಗೆ ಹೂವನ್ನು ನೀಡುವ ಮೂಲಕ ಅಭಿನಂದಿಸಿ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಇನ್ನೂ ಹೆಚ್ಚಿನ ಕೆಲಸಗಳನ್ನು ನಿರ್ವಹಿಸಿ, ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಲು ಪ್ರೋತ್ಸಾಹಿಸಲಾಯಿತು.

ಗ್ರಾಮ ಪಂಚಾಯತ್ ಸದಸ್ಯರಾದ ಸದಾನಂದ ಶೆಟ್ಟಿ, ಅಯೂಬ್ ಡಿ.ಕೆ, ನಿಸಾರ್, ಲೀಲಾವತಿ, ಅನಿಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪ್ರ) ಶ್ರವಣ್ ಕುಮಾರ್ , ಕಾರ್ಯದರ್ಶಿ ಆನಂದ್, ತೋಟಗಾರಿಕೆ ಇಲಾಖೆಯ ತಾಂತ್ರಿಕ ಸಹಾಯಕ ಮಲ್ಲಿನಾಥ ಬಿರಾದರ್, ಪಂಚಾಯತ್ ರಾಜ್ ಇಂಜಿನಿಯರ್ ಗಫೂರ್ ಸಾಬ್, ಗ್ರಾಮ ಸಂಪನ್ಮೂಲ ವ್ಯಕ್ತಿಗಳು, ಸುಗಮ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸವಿತಾ ಹಾಗೂ ಒಕ್ಕೂಟದ ಪದಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಉದ್ಯೋಗ ಖಾತ್ರಿ ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದರು.ಫೋಟೋ:

LEAVE A REPLY

Please enter your comment!
Please enter your name here