Site icon Suddi Belthangady

ಗುರುವಾಯನಕೆರೆ: ಎಕ್ಸೆಲ್ ಪಿಯು ಕಾಲೇಜಿನಲ್ಲಿ ಸ್ಟೇಟ್ ಟಾಪರ್ಸ್ ಗೆ ಲಕ್ಷ ಮೊತ್ತದೊಂದಿಗೆ ಸನ್ಮಾನ

ಗುರುವಾಯನಕೆರೆ: ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ 597 ಅಂಕಗಳ ಮೂಲಕ ರಾಜ್ಯಕ್ಕೆ ಎರಡನೆಯ ಸ್ಥಾನ ಪಡೆದ ಧನ್ವಿ ಭಟ್ ಹಾಗೂ 595 ಅಂಕಗಳ ಮೂಲಕ ರಾಜ್ಯಕ್ಕೆ ನಾಲ್ಕನೆಯ ಸ್ಥಾನ ಪಡೆದ ಅನುಪ್ರಿಯ ಇವರನ್ನು ಆಕ್ಷರೋತ್ಸವ – ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನದಲ್ಲಿ ಸನ್ಮಾನಿಸಲಾಯಿತು.

ಶಾಲು ಹೊದಿಸಿ, ಪೇಟಾ ತೊಡಿಸಿ, ಹಾರ ಹಾಕಿ, ಫಲಪುಷ್ಪ, ಸ್ಮರಣಿಕೆಯ ಜೊತೆಗೆ ತಲಾ ಒಂದು ಲಕ್ಷ ರೂಪಾಯಿ ನಗದು ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಧನ್ವಿ ಭಟ್ ಅವರ ತಾಯಿ ಪ್ರೀತಿಕಾ, ಅನುಪ್ರಿಯಾ ಹೆತ್ತವರಾದ ಚಂದ್ರಶೇಖರ ಪಿಕೆ, ಪೂರ್ಣಿಮಾ ಈ ಸಂದರ್ಭದಲ್ಲಿ ಜೊತೆಗಿದ್ದರು.

ಅತಿಥಿಗಳಾದ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ, ಡಾ.ಸುಬ್ಬಣ್ಣ ರೈ, ಡಾ.ಶ್ರೀನಾಥ್ ಎಂ.ಪಿ, ಸಂಪತ್ ಸುವರ್ಣ ಹಾಗೂ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿ ಅಭಿರಾಮ್ ಬಿ.ಎಸ್, ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Exit mobile version