ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ- ಯಶೋನಮನ ಕಾರ್ಯಕ್ರಮ ಉದ್ಘಾಟನೆ

0

ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಕ್ಯಾನ್ ಫಿನ್ ಹೋಮ್ಸ್ ಬೆಂಗಳೂರು, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಹಾಗೂ ಯಶೋನಮನ ಕಾರ್ಯಕ್ರಮವು ಮೇ 23ರಂದು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಜರುಗಿತು.

ಉಜಿರೆ ಹಳೆಪೇಟೆ ಸರಕಾರಿ ಹಿಡಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮವನ್ನು ಬೆಂಗಳೂರು ಕ್ಷೇಮವನದ ಸಿಇಒ ಶ್ರದ್ಧಾ ಅಮಿತ್‌ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶಿಯ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡುವೆಟ್ನಾಯ ವಹಿಸಿದರು.

ಮುಖ್ಯ ಅತಿಥಿಗಳಾಗಿ ಸೋನಿಯಾ ಯಶೋವರ್ಮ, ರೋಟರಿ ಜಿಲ್ಲಾ ಗವರ್ನರ್ ರೋ। ಎಚ್.ಆರ್. ಕೇಶವ್, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ರೋಟರಿ ಇಂದಿರಾ ನಗರ ನಿಯೋಜಿತ ಅಧ್ಯಕ್ಷೆ ಸುಪ್ರಿಯ ಕಂದಾರಿ, ರೋಟರಿ ಇಂದಿರಾ ನಗರ ಪೂರ್ವಾಧ್ಯಕ್ಷ ಜಗದೀಶ್ ಮುಗುಳಿ, ಉಜಿರೆ ಎಸ್.ಡಿ.ಎಂ ಪ್ರಾಂಶುಪಾಲ ಡಾ.ಕುಮಾರ್ ಹೆಗ್ಡೆ, ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ ಕಾರಂತ್, ಬದುಕು ಕಟ್ಟೋಣ ಬನ್ನಿ ಸಂಚಾಲಕ ಮೋಹನ್ ಕುಮಾ‌ರ್, ರಾಜೇಶ್ ಪೈ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್‌ ಇಳಂತಿಲ, ರೋಟರಿ ಕ್ಲಬ್ ನ ಅಧ್ಯಕ್ಷ ಅನಂತ್‌ ಭಟ್ ಮಚ್ಚಿಮಲೆ, ಪೂರಣ್ ವರ್ಮ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ, 7 ಮಂದಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, 1ನೇ ತರಗತಿಯಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ಬ್ಯಾಗ್‌ ಮತ್ತು ಟೀಫೀನ್ ಬಾಕ್ಸ್ ವಿತರಣೆ, 20 ಮಂದಿ ಕ್ರೀಡಾ ಸಾಧಕ ವಿದ್ಯಾರ್ಥಿಗಳನ್ನು ದತ್ತು ತೆಗೆದುಕೊಳ್ಳುವ ಕಾರ್ಯಕ್ರಮ ನಡೆಯಿತು.

ನ್ಯಾಯವಾದಿ ಧನಂಜಯ ರಾವ್ ಸ್ವಾಗತಿಸಿದರು. ಸಾಹಿತಿ ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು. ರಾಜೇಶ್ ಪೈ ಉಜಿರೆ ವಂದಿಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸದಸ್ಯರು, ರೋಟರಿ ಕ್ಲಬ್ ನ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here