ಉಜಿರೆ: ನಿಧನರಾದ ಎಂ.ತುಂಗಪ್ಪ ಗೌಡರಿಗೆ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

0

ಉಜಿರೆ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಇದರ ಸಹಭಾಗಿತ್ವದಲ್ಲಿ ಉಜಿರೆಯ ಎಸ್.ಪಿ ಆಯಿಲ್ ಮಿಲ್ ಸಭಾಂಗಣದಲ್ಲಿ ಇತ್ತೀಚೆಗೆ ನಿಧನರಾದ ಎಂ.ತುoಗಪ್ಪ ಗೌಡ ಇವರಿಗೆ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ಮೇ 23ರಂದು ಜರುಗಿತು.

ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಕೇರಿಮಾರು ಬಾಲಕೃಷ್ಣ ಗೌಡರ ಅಧ್ಯಕ್ಷತೆಯಲ್ಲಿ ಮಾತನಾಡಿದ ಇವರು ಅವರ ವ್ಯಕ್ತಿತ್ವ ಆದರ್ಶಗಳು, ಸಂಘಕ್ಕೆ ಅವರು ಸಲ್ಲಿಸಿದ ಸೇವೆಯ ಬಗ್ಗೆ ಮಾತಾಡಿ ಅವರ ಗುಣಗಾನ ಮಾಡಿ ಅವರು ತೋರಿಸಿಕೊಟ್ಟ ಆದರ್ಶಗಳನ್ನು ಪಾಲಿಸುವ ಮೂಲಕ ಅವರಿಗೆ ಗೌರವ ಸಲ್ಲಿಸುವಂತೆ ಕರೆಕೊಟ್ಟರು. ಹಾಗೂ ಗಣ್ಯರಾದ ಹೆಚ್.ರಾಮಕೃಷ್ಣ ಗೌಡ, ಸುಂದರ ಗೌಡ ಪುಡ್ಕೇತ್ತು, ವಾಮನ ಗೌಡ, ಸುರೇಶ್ ಗೌಡ ಕೂಡಿಗೆ, ದಿನೇಶ್ ಗೌಡ ಕಲ್ಲಾಜೆ ಗೌರವಿಸಿದರು.

ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷ ರಂಜನ್ ಜಿ ಗೌಡ, ಮಹಿಳಾ ವೇದಿಕೆಯ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ, ಒಕ್ಕಲಿಗರ ಸಂಘದ ಜಿಲ್ಲಾ ಸಮಿತಿ ಸದಸ್ಯ ದಾಮೋದರ ಗೌಡ ಸುರುಳಿ, ಯುವ ವೇದಿಕೆಯ ಅಧ್ಯಕ್ಷ ಅನಿಲ್ ಅಂತರ ಹಾಗೂ ಸಹಕಾರಿಯ ನಿರ್ದೇಶಕರಾದ ಜಯಂತ ಗೌಡ ಗುರಿಪಳ್ಳ, ಜಯಂತ ಗೌಡ ಓಣಿಯಾಲು, ಸಂಜೀವ ಗೌಡ ಪಾಂಚಜನ್ಯ, ಭರತ್ ಗೌಡ ಹಾನಿಬೆಟ್ಟು ಉಪಸ್ಥಿತರಿದ್ದರು.

ಒಕ್ಕಲಿಗ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಿದ್ದರು.

ಕೀರ್ತಿಶೇಷರಾದ ಯಂ.ತುoಗಪ್ಪ ಗೌಡ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಇತ್ತೀಚೆಗೆ ನಮ್ಮನಗಲಿದ ನಮ್ಮ ಸಮಾಜದ ಸದಸ್ಯರ ಆತ್ಮಕ್ಕೆ ಚಿರಶಾಂತಿ ಕೋರಿ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಕಾರ್ಯಕ್ರಮವನ್ನು ಒಕ್ಕಲಿಗ ಸಂಘದ ಕಾರ್ಯದರ್ಶಿ ಬಾಲಕೃಷ್ಣ ಗೌಡ ಕಲ್ಲಾಜೆ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.

LEAVE A REPLY

Please enter your comment!
Please enter your name here