Site icon Suddi Belthangady

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಕುಂಡದಬೆಟ್ಟು: ವಿದ್ಯೆಯ ಜೊತೆ ಜೊತೆಗೆ ತಮ್ಮಲ್ಲಿರುವ ವಿಶಿಷ್ಟ ಪ್ರತಿಭೆಗಳನ್ನು ಮೈಗೂಡಿಸಿಕೊಂಡು ಸಾಧನೆಯನ್ನು ಮಾಡಬೇಕೆಂದು ವಿದ್ಯಾರ್ಥಿಗಳಿಗೆ ಕರೆಯನ್ನು ನೀಡುತ್ತಾ ಭಜನೆಯಲ್ಲಿ ಶ್ರದ್ಧಾ ಭಕ್ತಿಯಿಂದ ಭಾಗವಹಿಸುವುದು, ವಿಧ್ಯೆಯ ಜೊತೆಗೆ ವಿನಯ, ಸಂಸ್ಕಾರಗಳನ್ನು ವಿದ್ಯಾರ್ಥಿ ದೆಸೆಯಲ್ಲಿ ಅಳವಡಿಸಿಕೊಂಡು ಮುಂದಿನ ಭವ್ಯ ಭಾರತದ ರತ್ನಗಳಾಗಿ ವಿದ್ಯಾರ್ಥಿಗಳು ಮೂಡಿ ಬರಲಿ ಎಂದು ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ರತ್ನಾಕರ್ ರಾವ್ ಹೇಳಿದರು ಅವರು ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ಮೇ 26ರಂದು ಮಂಜುಶ್ರೀ ಭಜನಾ ಮಂದಿರದಲ್ಲಿ ಹಮ್ಮಿಕೊಂಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭದಲ್ಲಿ ಮಾತಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮಂಜುಶ್ರೀ ಭಜನಾ ಮಂಡಳಿಯ ಅಧ್ಯಕ್ಷ ಕೆ.ವೈ. ರವಿಕುಮಾರ್ ಮಂಜನಕ್ಕಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ನಿರ್ಮಲ್ ಕುಮಾರ್ ಜೈನ್, ಮಂಜುಶ್ರೀ ಭಜನಾ ಮಂಡಳಿಯ ಕಾರ್ಯದರ್ಶಿ ತನಿಯಪ್ಪ ರಾಣ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕುಕ್ಕೇಡಿ ನಿಟ್ಟಡೆ ಗ್ರಾಮಗಳ ವ್ಯಾಪ್ತಿಯ ಎಂಟರಿಂದ ದ್ವಿತೀಯ ಪಿಯುಸಿ ವರೆಗಿನ 85 ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಪುಸ್ತಕ ವಿತರಣೆ ಮಾಡಲಾಯಿತು.

2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಯಲ್ಲಿ 90% ಮೇಲ್ಪಟ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.

ಕು.ವೈಷ್ಣವಿ ಎನ್ ಶೇಟ್ ರವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಮಂಡಳಿಯ ಮಾಜಿ ಅಧ್ಯಕ್ಷ ಭರತ್ ರಾಜ್ ಅಮೈ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಮಂಡಳಿಯ ಮಾಜಿ ಅಧ್ಯಕ್ಷ ಜಗನ್ನಾಥ ದೇವಾಡಿಗ ನಿರೂಪಿಸಿ ಮಾಜಿ ಅಧ್ಯಕ್ಷ ಸೋಮನಾಥ ಕೆ ವಿ ವಂದಿಸಿದರು.

Exit mobile version