ಉಜಿರೆ: ಲಾಯಿಲ ಗ್ರಾಮದಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಯುತ್ತಿರುವ 224ನೇ ವಿಶೇಷ ಮಧ್ಯವರ್ಜನ ಶಿಬಿರ.
ಕಾರ್ಯಕ್ರಮಕ್ಕೆ ಆಗಮಿಸಿ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಅವರು ವ್ಯಸನಮುಕ್ತ ಜೀವನದ ಜೊತೆಗೆ ಜೀವನದಲ್ಲಿ ಯಶಸ್ವಿ ಸಾಧಿಸಬೇಕೆಂಬ ಮಾತುಗಳೊಂದಿಗೆ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿ ಹಾಗೂ ಅವರ ಕುಟುಂಬಸ್ಥರಿಗೆ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿಯೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯ್ಸ್ ಹಾಗೂ ಆಡಳಿತಾತ್ಮಕ ಯೋಜನೆ ಅಧಿಕಾರಿ ಮಾಧವ ಹಾಗೂ ಸಿಬ್ಬಂಧಿಗಳು ಉಪಸ್ಥಿತರಿದ್ದರು.
p>