ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ್ ಮಹಿಳಾ ಒಕ್ಕೂಟದ ಬೆಳ್ಳಿಹಬ್ಬ ಸಂಭ್ರಮ ಮೇ 30ರಂದು ಧರ್ಮಸ್ಥಳ ಅಮೃತ ವರ್ಷಿಣಿ ಸಭಾಂಗಣದಲ್ಲಿ ನಡೆಯಿತು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿ ಶುಭ ಹಾರೈಸಿದರು.
ಅಧ್ಯಕ್ಷತೆ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಗೌರವಾಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆಯವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಖ್ಯಾತ ಮಕ್ಕಳ ಹೃದ್ರೋಗ ತಜ್ಞೆ ಡಾ|ವಿಜಯಲಕ್ಷ್ಮಿ ಬಾಳೇಕುಂದ್ರಿ, ಬೆಂಗಳೂರು ಖ್ಯಾತ ಚಿತ್ರನಟಿ ಪದ್ಮಜಾ ರಾವ್ ಭಾಗವಹಿಸಿದ್ದರು.
ಧರ್ಮಸ್ಥಳದ ಡಿ.ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರದ್ಧಾ ಅಮಿತ್, ಒಕ್ಕೂಟದ ಮಾಜಿ ಅಧ್ಯಕ್ಷರುಗಳಾದ ಕೇಶರಿ ರತ್ನಾಕರ್, ಶೀಲಾ ಅನಂತ್ರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸುಮನ್ ಪತ್ರಾವಳಿ, ಬೆಳಗಾವಿ, ವೀಣಾ ಶೆಟ್ಟಿ, ಮೂಡುಬಿದಿರೆ, ಸುಶೀಮಾ ಯಶವಂತ್, ಬೆಂಗಳೂರು ಛಾಯಾ, ಹುಣಸೂರು ಕುಮಾರಿ ಅನನ್ಯ, ಮೈಸೂರು ಇವರನ್ನು ಸನ್ಮಾನಿಸಲಾಯಿತು.ಹಾಗೂ ರಜತ ಸಂಚಿಕೆಯನ್ನು ಲೋಕಾರ್ಪಣೆ ಮಾಡಿದರು.
ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷೆ ಪದ್ಮನಿ ಪದ್ಮರಾಜ್ ಸ್ವಾಗತಿಸಿ, ಕಾರ್ಯದರ್ಶಿ ವೈಜಯಂತಿ ಪ್ರಸ್ತಾವಿಕವಾಗಿ ಮಾತನಾಡಿದರು.
ಕುಮುದಾ ನಾಗಭೂಷಣ್ ನಿರೂಪಿಸಿದರು.