Site icon Suddi Belthangady

ಶಾಸಕ ಹರೀಶ್ ಪೂಂಜ ವಿರುದ್ಧದ ಎರಡೂ ಪ್ರಕರಣಗಳಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ- ಶಾಸಕರೊಂದಿಗೆ ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ ೨೮ ಮಂದಿ ಮತ್ತು ಆಡಳಿತ ಸೌಧದ ಎದುರು- ಪ್ರತಿಭಟನೆ ನಡೆಸಿದ ೩೭ ಮಂದಿ ವಿರುದ್ಧವೂ ಕೇಸು ದಾಖಲು-ದೋಷಾರೋಪಣಾ ಪಟ್ಟಿ ಸಲ್ಲಿಕೆ- ಜಾಮೀನು ಬೇಡ, ಜೈಲಿಗೆ ಹೋಗುತ್ತೇನೆ ಎಂದಿದ್ದ ಶಾಸಕರು ಜಾಮೀನು ಪಡೆದು ಹೊರ ಬಂದರು ! ಸಾವಿರಾರು ಪುಟಗಳ ದೋಷಾರೋಪಣಾ ಪಟ್ಟಿ ಸಲ್ಲಿಕೆ-ಶಾಸಕ ಹರೀಶ್ ಪೂಂಜ ಪ್ರಮುಖ ಆರೋಪಿ

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿದ್ದನ್ನು ವಿರೋಧಿಸಿ ಪೊಲೀಸರಿಗೆ ಬೆದರಿಕೆ ಒಡ್ಡಿದ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡೂ ಪ್ರಕರಣಗಳ ತ್ವರಿತ ತನಿಖೆ ಪೂರ್ಣಗೊಳಿಸಿದ ಪೊಲೀಸ್ ಅಧಿಕಾರಿಗಳು ಶಾಸಕರು ಮತ್ತಿತರರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೇ.೨೮ರಂದು ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ.
ವಿಶೇಷ ತನಿಖಾ ತಂಡ ರಚನೆ: ಪ್ರಕರಣದ ತನಿಖೆಗಾಗಿ ಎಸ್.ಪಿ. ರಿಷ್ಯಂತ್ ಸಿ.ಬಿ. ಅವರಿಂದ ನಿಯೋಜಿಸಲ್ಪಟ್ಟಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿರುವ ಪುತ್ತೂರು ನಗರ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಸತೀಶ್ ಜಿ.ಜೆ. ಅವರು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಈ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಆದ್ದರಿಂದ ಪ್ರಕರಣದ ಮುಂದಿನ ವಿಚಾರಣೆಯನ್ನು ಈ ನ್ಯಾಯಾಲಯ ನೋಡಿಕೊಳ್ಳಲಿದೆ.
ಹರೀಶ್ ಪೂಂಜ ವಿರುದ್ಧದ ಕೇಸ್‌ನ ತನಿಖೆಗಾಗಿ ನಿಯೋಜಿಸಲ್ಪಟ್ಟಿದ್ದ ವಿಶೇಷ ತನಿಖಾ ತಂಡದಲ್ಲಿ ಪುತ್ತೂರು ನಗರ ಠಾಣಾ ಇನ್ಸ್‌ಪೆಕ್ಟರ್ ಸತೀಶ್ ಜಿ.ಜೆ. ಅವರು ಮುಖ್ಯಸ್ಥರಾಗಿದ್ದು ಉಪ್ಪಿನಂಗಡಿಯಲ್ಲಿ ಕಚೇರಿ ಹೊಂದಿರುವ ಪುತ್ತೂರು ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್ ರವಿ ಬಿ.ಎಸ್., ವಿಟ್ಲ ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್ ನಾಗರಾಜ್, ಪುತ್ತೂರು ಎಸ್.ಐ. ನಂದಕುಮಾರ್ ಮತ್ತು ಇತರ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.
ಶಶಿರಾಜ್ ಶೆಟ್ಟಿ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ-ಕೇಸು ದಾಖಲು: ಅಕ್ರಮ ಗಣಿಗಾರಿಕೆ ಮತ್ತು ಸ್ಪೋಟಕ ಕಾಯ್ದೆಯಡಿ ಬಂಧಿಸಲ್ಪಟ್ಟಿದ್ದ ಬಿಜೆಪಿ ಯುವ ಮೋರ್ಚಾದ ನಾಯಕರುಗಳಾದ ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಉಜಿರೆ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಈ ಪೈಕಿ ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಮತ್ತು ಶಶಿರಾಜ್ ಶೆಟ್ಟಿಯನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಪೊಲೀಸ್ ಠಾಣೆಯಲ್ಲಿ ನಡೆದ ಪ್ರತಿಭಟನೆಯ ವೇಳೆ ಶಾಸಕ ಹರೀಶ್ ಪೂಂಜ ಅವರು ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಮಾತ್ರವಲ್ಲದೆ ಪೊಲೀಸರ ವಿರುದ್ಧ ಅಸಂವಿಧಾನಿಕ ಪದ ಬಳಸಿ ನಿಂದಿಸಿದ್ದರು ಎಂದು ಒಂದು ಪ್ರಕರಣ ದಾಖಲಾಗಿತ್ತು.
ಈ ಘಟನೆಗೆ ಸಂಬಂಧಿಸಿ ಹರೀಶ್ ಪೂಂಜರವರ ಜತೆ ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಮಾರು ೨೮ಕ್ಕೂ ಅಧಿಕ ಮಂದಿಯನ್ನು ಆರೋಪಿಗಳು ಎಂದು ಹೆಸರಿಸಲಾಗಿದ್ದು ಇವರ ವಿರುದ್ಧವೂ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಶಶಿರಾಜ್ ಶೆಟ್ಟಿ ಬಂಧನ ಖಂಡಿಸಿ ಬಿಜೆಪಿ ಮಂಡಲದ ವತಿಯಿಂದ ಬೆಳ್ತಂಗಡಿ ಆಡಳಿತ ಸೌಧದ ಬಳಿ ನಡೆದಿದ್ದ ಪ್ರತಿಭಟನೆಯ ವೇಳೆ ಮತ್ತೆ ಶಾಸಕರು ಪೊಲೀಸರ ವಿರುದ್ಧವೇ ಹರಿಹಾಯ್ದ ಬಗ್ಗೆ ಎರಡನೇ ಎಫ್‌ಐಆರ್ ದಾಖಲಾಗಿತ್ತು. ಈ ಸಂಬಂಧವಾಗಿ ಶಾಸಕರಿಗೆ ನೋಟೀಸು ನೀಡಿ ಠಾಣೆಗೆ ವಿಚಾರಣೆಗೆ ಕರೆತರಲು ಪೊಲೀಸರು ಮನೆಗೆ ತೆರಳಿದ್ದ ವೇಳೆ ಅಲ್ಲೂ ಸಾವಿರಾರು ಜನ ಜಮಾಯಿಸಿ ಹೈಡ್ರಾಮಾ ನಡೆದಿತ್ತು.
ಈ ಎರಡೂ ಪ್ರಕರಣಗಳ ತ್ವರಿತ ತನಿಖೆಗೆ ಎಸ್.ಪಿ ಅವರು ನಿಯೋಜಿಸಿದ್ದ ಪೊಲೀಸ್ ಅಧಿಕಾರಿಗಳ ತಂಡ ಇದೀಗ ತನಿಖೆ ಪೂರ್ತಿಗೊಳಿಸಿದ್ದು ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ.
ಸರಕಾರಿ ವಕೀಲರ ಅಧ್ಯಯನ: ಆಡಳಿತ ಸೌಧದಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿ ಶಾಸಕ ಹರೀಶ್ ಪೂಂಜ ವಿರುದ್ಧ ದಾಖಲಾಗಿರುವ ಕೇಸ್‌ನಲ್ಲಿ ೩೭ಕ್ಕೂ ಅಧಿಕ ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದ್ದು ಇವರೆಲ್ಲರ ವಿರುದ್ಧವೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ. ಎರಡೂ ಪ್ರಕರಣಗಳ ಎಫ್‌ಐಆರ್ ಮತ್ತು ಜಾರ್ಜ್‌ಶೀಟ್ ಕುರಿತು ಸರಕಾರಿ ವಕೀಲರು ಅಧ್ಯಯನ ನಡೆಸುತ್ತಿದ್ದು ತನಿಖೆ ಪೂರ್ಣಗೊಂಡ ಬಳಿಕ ಎರಡೂ ಪ್ರಕರಣಗಳಿಗೆ ಸಂಬಂಧಿಸಿ ಹೆಚ್ಚುವರಿ ಅಂಶಗಳು ಸೇರ್ಪಡೆಗೊಳ್ಳಲಿದೆ ಎಂದು ತಿಳಿದು ಬಂದಿದೆ.
ಜಾಮೀನು ಬೇಡ, ಜೈಲಿಗೆ ಹೋಗುತ್ತೇನೆ ಎಂದಿದ್ದ ಶಾಸಕರು ಜಾಮೀನು ಪಡೆದು ಹೊರ ಬಂದರು ! : ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಮೇ ೧೮ರಂದು ಪೊಲೀಸ್ ಠಾಣೆಯಲ್ಲಿ ಮತ್ತು ಮೇ ೨೦ರಂದು ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ ೨ ಪ್ರತ್ಯೇಕ ಕೇಸ್‌ಗೆ ಒಳಗಾಗಿರುವ ಶಾಸಕ ಹರೀಶ್ ಪೂಂಜ ಅವರ ಗರ್ಡಾಡಿಯಲ್ಲಿರುವ ಮನೆಗೆ ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ. ಸುಬ್ಬಾಪೂರ್ ಮಠ್, ಎಸ್.ಐ. ಚಂದ್ರಶೇಖರ್ ಮತ್ತು ವೇಣೂರು ಪೊಲೀಸ್ ಠಾಣಾ ಎಸ್.ಐ. ಶ್ರೀಶೈಲ ಅವರ ನೇತೃತ್ವದ ಪೊಲೀಸರ ತಂಡ ಹರೀಶ್ ಪೂಂಜ ಅವರಿಗೆ ನೋಟೀಸ್ ನೀಡಲು ಮುಂದಾದ ವೇಳೆ ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಚಕಮಕಿ ನಡೆದಿತ್ತು. ಹರೀಶ್ ಪೂಂಜ ಪರ ವಕೀಲರಾದ ಮಂಗಳೂರಿನ ಶಂಭು ಶರ್ಮ, ಅಜಯ್ ಸುವರ್ಣ, ಬೆಳ್ತಂಗಡಿಯ ಸುಬ್ರಹ್ಮಣ್ಯ ಕುಮಾರ್ ಅಗರ್ತ ಮತ್ತು ಯತೀಶ್ ಅವರು ಕಾನೂನು ಅಂಶಗಳನ್ನು ಉಲ್ಲೇಖಿಸಿ ಬಂಧನಕ್ಕೆ ಬಲವಾದ ಆಕ್ಷೇಪ ವ್ಯಕ್ತಪಡಿಸಿ ಹರೀಶ್ ಪೂಂಜ ಬಂಧನವಾಗದಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಇದು ಕಾರ್ಯಕರ್ತರ ಹರ್ಷೋದ್ಘಾರ ಮತ್ತು ಸಂಭ್ರಮಾಚರಣೆಗೆ ಕಾರಣವಾಗಿತ್ತು.
ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಬಂಧನ ಖಂಡಿಸಿ ತಾಲೂಕು ಕಚೇರಿ ಎದುರು ನಡೆದಿದ್ದ ಬಿಜೆಪಿ ಪ್ರತಿಭಟನೆಯ ವೇಳೆ ಪೊಲೀಸರ ಕಾಲರ್ ಹಿಡಿಯಲು ಸಿದ್ಧ, ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜೆ. ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆ, ಬೇಲ್ ಬೇಡ ಜೈಲಿಗೆ ಹೋಗಲೂ ಸಿದ್ಧ ಎಂದು ಘೋಷಿಸಿದ್ದ ಶಾಸಕ ಹರೀಶ್ ಪೂಂಜ ಅವರು ಅದೇ ರೀತಿ ನಡೆದುಕೊಂಡಿದ್ದಾರೆ ಎಂದು ಸಂಭ್ರಮ ಪಟ್ಟಿದ್ದ ಅವರ ಅಭಿಮಾನಿಗಳಿಗೆ ನಿರಾಸೆಯಾಗುವ ಘಟನೆ ಬಳಿಕ ನಡೆದಿದೆ. ಹರೀಶ್ ಪೂಂಜ ಅವರು ಯಾವುದೇ ಕಾರಣಕ್ಕೂ ಜಾಮೀನು ಪಡೆದುಕೊಳ್ಳುವುದಿಲ್ಲ. ಕಾರ್ಯಕರ್ತರಿಗೆ ಬೇಕಾಗಿ ಜೈಲಿಗೂ ಹೋಗಲು ಸಿದ್ಧರಾಗುತ್ತಾರೆ ಎಂದುಕೊಂಡಿದ್ದವರ ನಂಬಿಕೆ ಹುಸಿಯಾದ ಬೆಳವಣಿಗೆ ಮತ್ತೆ ನಡೆದಿದೆ.
ಠಾಣೆಗೆ ಹಾಜರಾದ ಪೂಂಜ: ಪೊಲೀಸ್ ಅಧಿಕಾರಿಗಳಿಂದ ವಿಚಾರಣೆಗೆ ಹಾಜರಾಗಲು ನೊಟೀಸ್ ಪಡೆದಿದ್ದ ಶಾಸಕ ಹರೀಶ್ ಪೂಂಜ ಅವರು ರಾತ್ರಿ ೯.೩೦ರ ವೇಳೆಗೆ ಪೊಲೀಸ್ ಠಾಣೆಗೆ ಹಾಜರಾಗಿ ಬಂಧನಕ್ಕೊಳಗಾಗಿ ಜಾಮೀನು ಪಡೆದು ಬಿಡುಗಡೆಗೊಂಡಿದ್ದಾರೆ.
ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಶಾಸಕರಾದ ವಿ. ಸುನಿಲ್ ಕುಮಾರ್, ವೇದವ್ಯಾಸ ಕಾಮತ್, ರಾಜೇಶ್ ನಾಕ್ ಉಳೇಪಾಡಿಗುತ್ತು, ಭಾಗೀರಥಿ ಮುರುಳ್ಯ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ವಕೀಲರಾದ ಶಂಭು ಶರ್ಮ, ಸುಬ್ರಹ್ಮಣ್ಯ ಕುಮಾರ್ ಅಗರ್ತ, ಅನಿಲ್ ಕುಮಾರ್ ಯು. ಮತ್ತು ಬೆಳ್ತಂಗಡಿಯ ಬಿಜೆಪಿ ಮುಖಂಡರೊಂದಿಗೆ ಮೇ ೨೨ರಂದು ರಾತ್ರಿ ೯.೩೦ಕ್ಕೆ ಪೊಲೀಸ್ ಠಾಣೆಗೆ ಹಾಜರಾಗಿದ್ದ ಹರೀಶ್ ಪೂಂಜ ಅವರನ್ನು ಡಿವೈಎಸ್ಪಿ ವಿಜಯಪ್ರಸಾದ್ ಮತ್ತು ಇನ್ಸ್‌ಪೆಕ್ಟರ್ ಬಿ.ಜಿ.ಸುಬ್ರಾಪುರಮಠ್ ಅವರು ಒಂದು ಗಂಟೆ ಸಮಯ ವಿಚಾರಣೆ ನಡೆಸಿ ನಿಯಮ ಪ್ರಕಾರ ಬಂಧಿಸಿ ಬಳಿಕ ಠಾಣಾ ಜಾಮೀನಿನಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಜಾಮೀನು ಪಡೆದುಕೊಳ್ಳುವುದಿಲ್ಲ ಎಂದು ಹೇಳಿದ್ದ ಶಾಸಕರು ಎರಡನೇ ಪ್ರಕರಣದಲ್ಲಿ ಜಾಮೀನು ಪಡೆದು ಬಂಧಮುಕ್ತರಾಗಿದ್ದಾರೆ. ಮೊದಲ ಕೇಸ್ ಗಂಭೀರ ಪ್ರಕರಣವಾಗಿರುವುದರಿಂದ ಅವರು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಳ್ಳಬೇಕಿದೆ. ಈ ಎರಡೂ ಕೇಸ್‌ಗಳ ವಿಚಾರಣೆಗೆ ತಡೆಯಾಜ್ಞೆ ತರಲು ಹೈಕೋರ್ಟ್ ಮೆಟ್ಟಿಲೇರಲು ಶಾಸಕ ಹರೀಶ್ ಪೂಂಜ ತಯಾರಿ ನಡೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಸಾವಿರಾರು ಪುಟಗಳ ದೋಷಾರೋಪಣಾ ಪಟ್ಟಿ ಸಲ್ಲಿಕೆ-ಶಾಸಕ ಹರೀಶ್ ಪೂಂಜ ಪ್ರಮುಖ ಆರೋಪಿ: ಮೇ ೧೮ರಂದು ಪೊಲೀಸ್ ಠಾಣೆಯಲ್ಲಿ ಮತ್ತು ಮೇ ೨೦ರಂದು ಆಡಳಿತ ಸೌಧದಲ್ಲಿ ಪ್ರತಿಭಟನೆ ನಡೆಸಿದ ಘಟನೆಗೆ ಸಂಬಂಧಿಸಿದ ಕೇಸ್‌ಗಳಲ್ಲಿ ಶಾಸಕ ಹರೀಶ್ ಪೂಂಜ ಅವರನ್ನು ಪ್ರಮುಖ ಆರೋಪಿಯನ್ನಾಗಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ ಕೇಸ್‌ನಲ್ಲಿ ೨೮ ಮಂದಿ ಮತ್ತು ಆಡಳಿತ ಸೌಧದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ೩೭ ಮಂದಿಯನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ. ಶಾಸಕರ ಸಹಿತ ಇವರೆಲ್ಲರ ವಿರುದ್ಧವೂ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ.
ಆರಂಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಬಿ.ಜಿ. ಸುಬ್ಬಾಪುರ್‌ಮಠ ಅವರು ನಡೆಸುತ್ತಿದ್ದ ವಿಚಾರಣೆಯನ್ನು ಇದೀಗ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿರುವ ಪುತ್ತೂರು ನಗರ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಸತೀಶ್ ಬಿ.ಜೆ.ಅವರು ನಡೆಸುತ್ತಿದ್ದಾರೆ. ಪ್ರಥಮ ಹಂತದಲ್ಲಿ ಎರಡೂ ಕೇಸ್‌ಗಳಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದ್ದು ತನಿಖೆ ಮುಂದುವರಿಯುತ್ತಿದೆ.
ಚಾರ್ಜ್ ಶೀಟ್‌ನ ವಿವರ: ತನಿಖಾಧಿಕಾರಿಯವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪಣಾ ಪಟ್ಟಿಯಲ್ಲಿ ‘ಶಾಸಕ ಹರೀಶ್ ಪೂಂಜ ಅವರು ಮೇ ೧೮ರಂದು ರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಅಕ್ರಮ ಗಲ್ಲು ಗಣಿಗಾರಿಕೆ ನಡೆಸುತ್ತಿರುವ ಆರೋಪದಡಿ ಬಂಧಿತನಾಗಿರುವ ಶಶಿರಾಜ್ ಶೆಟ್ಟಿಯವರನ್ನು ಬಿಡುಗಡೆ ಮಾಡುವಂತೆ ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ ಅವಾಚ್ಯವಾಗಿ ಪೊಲೀಸ್ ಸ್ಟೇಷನ್ ನಿಮ್ಮ ಅಪ್ಪಂದ ಜಾಗ್ರತೆ ಎಂದು ಬೈದು ಬೆದರಿಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಪೊಲೀಸ್ ಇಲಾಖೆ, ಪೊಲೀಸ್ ಅಧಿಕಾರಿಗಳ ಬಗ್ಗೆ ಅಸಾಂವಿಧಾನಿಕ ಶಬ್ದಗಳಲ್ಲಿ ಮಾತನಾಡಿ ದುರ್ವರ್ತನೆ ತೋರಿದ್ದಾರೆ. ಈ ಬಗ್ಗೆ ಅವರ ವಿರುದ್ಧ ಐಪಿಸಿ ೩೫೩ ಮತ್ತು ೫೦೪ರಂತೆ ಪ್ರಕರಣ ದಾಖಲಿಸಲಾಗಿದೆ.
ಮುಂದುವರಿದು ಮೇ ೨೦ರಂದು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಶಾಸಕ ಹರೀಶ್ ಪೂಂಜ ಅವರು ಕಾನೂನುಬಾಹಿರವಾಗಿ ಬೆಳ್ತಂಗಡಿ ವಿಕಾಸ ಸೌಧದ ಮುಂಭಾಗದಲ್ಲಿ ಜನರನ್ನು ಗುಂಪು ಸೇರಿಸಿ ಪ್ರತಿಭಟನಾ ಸಭೆ ನಡೆಸಿ ಪ್ರಸ್ತುತ ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲೂ ಸಿದ್ಧ ಎಂದೂ ಬೆಂಗಳೂರಿನ ಡಿ.ಜೆ.ಹಳ್ಳಿ, ಕೆ.ಜಿ. ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆ ಎಂದೂ ಬೆದರಿಸಿ ಸಾರ್ವಜನಿಕ ನೌಕರರಾದ ಬೆಳ್ತಂಗಡಿ ಠಾಣಾ ಪೊಲೀಸ್ ನಿರೀಕ್ಷಕರಿಗೆ, ಇತರ ಪೊಲೀಸ್ ಅಧಿಕಾರಿಗಳಿಗೆ, ಪೊಲೀಸ್ ಇಲಾಖೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿ ಜೀವ ಬೆದರಿಕೆ ಒಡ್ಡಿ ತಾಲೂಕು ಕಚೇರಿಗೆ ತಮ್ಮ ಕೆಲಸ ಕಾರ್ಯಗಳಿಗಾಗಿ ಬರುವ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಹೋಗದಂತೆ ತಡೆಯೊಡ್ಡಿದ್ದಾರೆ. ಈ ಬಗ್ಗೆ ಶಾಸಕ ಹರೀಶ್ ಪೂಂಜ ವಿರುದ್ಧ ಐಪಿಸಿ ೧೪೩, ೧೪೭, ೩೪೧, ೫೦೪, ೫೦೬ ಜೊತೆಗೆ ೧೪೯ರಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಎರಡನೇ ಕೇಸ್‌ನಲ್ಲಿ ಪ್ರಮುಖ ಆರೋಪಿ ಹರೀಶ್ ಪೂಂಜ ಅವರನ್ನು ಬಂಧಿಸಿ ಠಾಣಾ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿದೆ.
ಎರಡನೇ ಕೇಸ್‌ನಲ್ಲಿ ನೊಟೀಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿರುತ್ತಾರೆ. ಎರಡು ಪ್ರತ್ಯೇಕ ಕೇಸ್‌ಗೆ ಸಂಬಂಧಿಸಿ ಹರೀಶ್ ಪೂಂಜ ಅವರು ಪ್ರಮುಖ ಆರೋಪಿಯಾಗಿದ್ದು ಅವರು ಜನರ ತಂಡವನ್ನು ಸೇರಿಸಿಕೊಂಡು ಈ ಅಪರಾಧಿ ಕೃತ್ಯಗಳನ್ನು ಎಸಗಿದ್ದಾರೆ. ಪ್ರಮುಖ ಆರೋಪಿ ಹರೀಶ್ ಪೂಂಜ ಮತ್ತಿತರರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಿಕೊಂಡಿರುವ ಎರಡೂ ಪ್ರಕರಣಗಳು ಸತ್ಯಾಂಶದಿಂದ ಕೂಡಿದ್ದು ಹರೀಶ್ ಪೂಂಜ ಮತ್ತಿತರರು ಘೋಷಿತ ಅಪರಾಧಿಗಳಾಗಿರುತ್ತಾರೆ’ ಎಂದು ವಿವರಣೆ ನೀಡಿದ್ದಾರೆ. ಸಾವಿರಾರು ಪುಟಗಳ ಜಾರ್ಜ್‌ಶೀಟ್ ಸಲ್ಲಿಕೆ ಮಾಡಿರುವ ತನಿಖಾಧಿಕಾರಿಯವರು ಘಟನೆಯ ವಿಡಿಯೋ, ಆಡಿಯೋ, ಪತ್ರಿಕೆ ಮತ್ತು ದೃಶ್ಯ ಮಾಧ್ಯಮದ ತುಣುಕುಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಮಧ್ಯೆ ಎರಡು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ಶಾಸಕ ಹರೀಶ್ ಪೂಂಜ ಅವರು ತನ್ನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು ಎಫ್‌ಐಆರ್ ಮತ್ತು ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ಚಾರ್ಜ್‌ಶೀಟ್ ರದ್ದುಪಡಿಸಲು ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಕಳೆಂಜ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಗೆ ಸಿದ್ಧತೆ-ಹಳೆಯ ಕೇಸ್ ಕೆದಕುತ್ತಿರುವ ಪೊಲೀಸರು-

೨ ಪ್ರಕರಣಗಳಲ್ಲಿ ಶಾಸಕ ಹರೀಶ್ ಪೂಂಜ ವಿರುದ್ಧ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆ ಮಾಡಿರುವ ಪೊಲೀಸ್ ಅಧಿಕಾರಿಗಳು ಹರೀಶ್ ಪೂಂಜ ವಿರುದ್ಧ ಇನ್ನೊಂದು ದೋಷಾರೋಪಣಾ ಪಟ್ಟಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಕಳೆಂಜದಲ್ಲಿ ಲೋಲಾಕ್ಷರವರು ಅಕ್ರಮವಾಗಿ ಮನೆ ಕಟ್ಟಿದ್ದಾರೆ ಎಂಬ ಕಾರಣಕ್ಕಾಗಿ ಅದನ್ನು ತೆರವು ಮಾಡಲು ಅರಣ್ಯ ಇಲಾಖಾಧಿಕಾರಿಗಳು ಮುಂದಾದ ವೇಳೆ ಜಿಲ್ಲೆಯ ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಮತ್ತು ಕಾರ್ಯಕರ್ತರ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಸಿ ಅರಣ್ಯ ಇಲಾಖಾಧಿಕಾರಿಗಳು ಮನೆ ತೆರವು ಮಾಡುವುದನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದ ಶಾಸಕ ಹರೀಶ್ ಪೂಂಜ ಅವರು ಪ್ರತಿಭಟನೆಯ ವೇಳೆ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಉಪ್ಪಿನಂಗಡಿ ವಲಯಾಣ್ಯಾಧಿಕಾರಿ ಜಯಪ್ರಕಾಶ್‌ರವರ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೇಸ್‌ನ ವಿಚಾರಣೆ ಅಂತಿಮಗೊಳಿಸಿರುವ ತನಿಖಾಧಿಕಾರಿಯವರು ಈ ಪ್ರಕರಣದಲ್ಲಿಯೂ ಹರೀಶ್ ಪೂಂಜ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಲು ಸಿದ್ಧತೆ ನಡೆಸಿದ್ದು ಸರಕಾರಿ ವಕೀಲರೊಂದಿಗೆ ಕಾನೂನು ಸಲಹೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಇದರೊಂದಿಗೆ ಪೊಲೀಸ್ ಅಧಿಕಾರಿಗಳು ಹರೀಶ್ ಪೂಂಜ ವಿರುದ್ಧ ಇದುವರೆಗೆ ಯಾವ ಪ್ರಕರಣ ದಾಖಲಾಗಿದೆ, ಯಾವ ಪ್ರಕರಣಗಳಲ್ಲಿ ಜಾರ್ಜ್‌ಶೀಟ್ ಸಲ್ಲಿಕೆಯಾಗಿದೆ, ಎಷ್ಟು ಪ್ರಕರಣಗಳಲ್ಲಿ ಬಿ ರಿಪೋರ್ಟ್ ಆಗಿದೆ. ಜಾರ್ಜ್‌ಶೀಟ್ ಸಲ್ಲಿಕೆಯಾಗಿರುವ ಪ್ರಕರಣಗಳು ನ್ಯಾಯಾಲಯದ ಯಾವ ಹಂತದ ವಿಚಾರಣೆಯಲ್ಲಿದೆ ಎಂದು ಕೆದಕುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಪೊಲೀಸ್ ಠಾಣೆಯಲ್ಲಿ ಹರೀಶ್ ಪೂಂಜರ
ಬಂಧನ, ಬಿಡುಗಡೆ ಹೀಗೆ ನಡೆಯಿತು.:

ಶಾಸಕ ಹರೀಶ್ ಪೂಂಜ ವಿರುದ್ಧ ದಾಖಲಾಗಿದ್ದ ೨ನೇ ಕೇಸ್(ಕಲಂ ೧೪೩, ೧೪೭, ೩೪೧, ೫೦೪, ೫೦೬ ಜೊತೆಗೆ ೧೪೯ ಐ.ಪಿ.ಸಿ)ಗೆ ಸಂಬಂಧಿಸಿ ಪೊಲೀಸ್ ಸರ್ಪಗಾವಲು ಹಾಕಿದ್ದ ಅಧಿಕಾರಿಗಳಿಗೆ ಸಮರ್ಥ ವಕೀಲರು ಮತ್ತು ಸಾವಿರಾರು ಕಾರ್ಯಕರ್ತರ ಪ್ರಬಲ ಪ್ರತಿರೋಧದಿಂದ ಬಂಧನ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ ವಿಚಾರಣೆಗೆ ಹಾಜರಾಗಲು ನೊಟೀಸ್ ಪಡೆದ ಶಾಸಕ ಹರೀಶ್ ಪೂಂಜ ಅವರು ಅನಿವಾರ್ಯವಾಗಿ ರಾತ್ರಿ ವೇಳೆ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.
ಈ ವೇಳೆ ಡಿವೈಎಸ್‌ಪಿ ವಿಜಯಪ್ರಸಾದ್ ಮತ್ತು ಇನ್ಸ್‌ಪೆಕ್ಟರ್ ಬಿ.ಜಿ.ಸುಬ್ಬಾಪೂರ್ ಮಠ್ ಅವರು ನಿಯಮ ಪ್ರಕಾರ ಶಾಸಕರನ್ನು ವಿಚಾರಣೆಗೊಳಪಡಿಸಿದ್ದಾರೆ. ವೈಯುಕ್ತಿಕ ವಿವರ, ಕೇಸ್‌ನ ವಿವರ ದಾಖಲಿಸಿದ ಪೊಲೀಸ್ ಅಧಿಕಾರಿಗಳು ನಂತರ ವೈಯುಕ್ತಿಕ ಜಾಮೀನು ಪಡೆದು ಶಾಸಕರನ್ನು ಬಿಡುಗಡೆ ಮಾಡಿದ್ದಾರೆ. ತನ್ನ ಮೇಲೆ ದಾಖಲಾಗಿರುವ ಮೊದಲ (ಸೆಕ್ಷನ್ ೩೫೩ ಮತ್ತು ೫೦೪ ಐಪಿಸಿ)ಕೇಸ್‌ಗೆ ಸಂಬಂಧಿಸಿ ಶಾಸಕ ಹರೀಶ್ ಪೂಂಜ ಅವರಿಗೆ ವಿಚಾರಣೆಗೆ ಹಾಜರಾಗಲು ತನಿಖಾಧಿಕಾರಿ ನೊಟೀಸ್ ಜಾರಿ ಮಾಡಿದ್ದು ಶಾಸಕರು ಕಾಲಾವಕಾಶ ಕೇಳಿದ್ದಾರೆ. ಈ ಕಾಲಾವಕಾಶ ಈಗಾಗಲೇ ಮುಗಿದಿದೆ. ಈ ಬಗ್ಗೆ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ತನಿಖಾಧಿಕಾರಿಯವರು ಎಸ್‌ಪಿಯವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ವಿಚಾರಣೆಗೆ ಹಾಜರಾಗಬೇಕು ಎಂದಾಗ ಶಾಸಕರು ಜನ ಸೇರಿಸಿದ್ರು-ಸ್ಟೇಷನ್ ಬೈಲ್‌ನಲ್ಲಿ ಬಿಡುಗಡೆ ಮಾಡಿzವೆ: ಎಸ್.ಪಿ. ರಿಷ್ಯಂತ್:

ಬೆಳ್ತಂಗಡಿ ಠಾಣಾ ೫೮/೨೦೨೪ ಕಲಂ:೧೪೩, ೧೪೭, ೩೪೧, ೫೦೪, ೫೦೬ ಜೊತೆಗೆ ೧೪೯ ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರನ್ನು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಬಿ.ರಿಷ್ಯಂತ್ ಅವರು ಪೊಲೀಸರು ಹಾಗೂ ಮಾಧ್ಯಮದವರು ಇರುವ ವಾಟ್ಸಪ್ ಗ್ರೂಪ್‌ನಲ್ಲಿ ಮೇ ೨೨ರಂದು ರಾತ್ರಿ ೧೦.೪೩ಕ್ಕೆ ಸಂದೇಶ ರವಾನಿಸಿದ್ದಾರೆ.
ರಾತ್ರಿ ೧೦ ಗಂಟೆಗೆ ಇದೇ ವಾಟ್ಸಪ್ ಗ್ರೂಪ್‌ನಲ್ಲಿ ಸಂದೇಶ ರವಾನಿಸಿದ್ದ ಎಸ್.ಪಿ.ಯವರು ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ೨ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿತರಾದ ಹರೀಶ್ ಪೂಂಜರನ್ನು ವಿಚಾರಣೆಗಾಗಿ ಠಾಣೆಗೆ ಕರೆ ತರಲು ಬೆಳ್ತಂಗಡಿ ಠಾಣಾ ಪೊಲೀಸರು ಸದ್ರಿಯವರ ಮನೆಗೆ ತೆರಳಿರುತ್ತಾರೆ. ಈ ವೇಳೆ ಸ್ಥಳದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ನಳಿನ್ ಕುಮಾರ್ ಕಟೀಲ್‌ರವರು ತಾನೇ ಖುದ್ದಾಗಿ ಹರೀಶ್ ಪೂಂಜಾರನ್ನು ವಿಚಾರಣೆಗೆ ಠಾಣೆಗೆ ಕಳುಹಿಸುವುದಾಗಿ ವಿನಂತಿಸಿಕೊಂಡಿರುತ್ತಾರೆ ಹಾಗೂ ಅದರಂತೆ ಸಂಸದರು ಆರೋಪಿತರಾದ ಹರೀಶ್ ಪೂಂಜಾರನ್ನು ಪೊಲೀಸರೊಂದಿಗೆ ಠಾಣೆಗೆ ಕಳುಹಿಸಿರುತ್ತಾರೆ. ಪ್ರಸ್ತುತ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಪೂಂಜಾರ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದರು.
ಶಾಸಕರ ಮನೆಗೆ ಮೊದಲು ಮೂರೇ ಜನ ಪೊಲೀಸರನ್ನು ಕಳುಹಿಸಿದ್ವಿ. ಅವರನ್ನು ವಿಚಾರಣೆಗೆ ಬರಲು ನೋಟಿಸ್ ನೀಡಲು ಹೋಗಲಾಗಿತ್ತು. ಮೂರು ಜನ ಪೊಲೀಸರು ಹೋಗಿ ವಿಚಾರಣೆಗೆ ಹಾಜರಾಗಬೇಕು ಎಂದಾಗ ಅವರು ಒಳಹೋಗಿ ಜನ ಸೇರಿಸಿದ್ರು. ಲಾ ಆಂಡ್ ಆರ್ಡರ್ ಕಂಟ್ರೋಲ್‌ಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಯಿತು. ಶಾಸಕ ಪೂಂಜಾ ವಿಚಾರಣೆಗೆ ಹೋದಾಗ ವಕೀಲರು ಪೊಲೀಸರಿಗೆ ಬುದ್ಧಿ ಕಲಿಸಿದ್ರು ಅಂತೆಲ್ಲ ಚರ್ಚೆ ಆಗ್ತಿದೆ. ಆ ತರಹ ಏನಿಲ್ಲ. ಹಾಗಂತ ಪೊಲೀಸರು ಅಲ್ಲಿಂದ ಓಡಿ ಹೋಗಿದ್ದಲ್ಲ. ಜನಪ್ರತಿನಿಧಿಯವರು ಮನವಿ ಮಾಡಿಕೊಂಡು ಅಲ್ಲಿ ರೋಡ್ ಕೇವಲ ೨೦ ಅಡಿ ಇದೆ ಜಖಂ ಆಗಿದೆ. ನಾವೇ ಠಾಣೆಗೆ ಕರೆ ತರುತ್ತೇವೆ ಎಂದ ಕಾರಣ ಪೊಲೀಸರು ಹೊರ ಬಂದದ್ದು. ೨೦೦೦ ಜನ ಸೇರಿಸಿದ್ರೆ ವಿಚಾರಣೆ ಮಾಡಬಾರದು, ೫೦೦೦ ಸೇರಿದರೆ ಕೇಸೇ ಮಾಡಬಾರದು ಅಂತ ಇಲ್ವಲ್ಲ. ಕಾನೂವಿಗೆ ಎಲ್ಲರೂ ಒಂದೇ ತಪ್ಪು ಮಾಡಿದರೆ ಕೇಸ್, ವಿಚಾರಣೆ ಎಲ್ಲವೂ ಇರ್ತದೆ ಎಂದು ಎಸ್‌ಪಿ ರಿಷ್ಯಂತ್ ಅವರು ಮೇ ೨೭ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಅಧಿವೇಶನದಲ್ಲಿ ಪ್ರಶ್ನಿಸುತ್ತೇವೆ: ಸುನೀಲ್ ಕುಮಾರ್
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರನ್ನು ರಾಜಕೀಯ ದುರುzಶ ಮತ್ತು ದ್ವೇಷ ರಾಜಕಾರಣದ ಭಾಗವಾಗಿ ಬಂಧಿಸಲು ಯತ್ನಿಸಿದ್ದು, ಈ ಪ್ರಕರಣವನ್ನು ಇಷ್ಟಕ್ಕೇ ಬಿಡುವ ಪ್ರಶ್ನೆ ಇಲ್ಲ. ಅಧಿವೇಶನದಲ್ಲಿ ಪ್ರಶ್ನಿಸುತ್ತೇವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಹೇಳಿದ್ದಾರೆ.
ಶಾಸಕ ಹರೀಶ್ ಪೂಂಜ ಪ್ರಕರಣದ ಹಿನ್ನೆಲೆಯಲ್ಲಿ ಬೆಳ್ತಂಗಡಿಗೆ ಭೇಟಿ ನೀಡಿದ ಅವರು ಮಾತನಾಡಿ, ಕ್ರಿಮಿನಲ್‌ಗಳನ್ನು ಪೊಲೀಸರು ನೇರ ಕಾರ್ಯಾಚರಣೆ ಮೂಲಕ ಬಂಧಿಸಿರುವುದನ್ನು ನೋಡಿzವೆ. ಈಗ ಓರ್ವ ಜನಪ್ರತಿನಿಧಿಯನ್ನು ಈ ರೀತಿ ಬಂಧಿಸಲು ಮುಂದಾಗಿರುವುದು ರಾಜಕೀಯ ಹುನ್ನಾರ. ಪಾಕಿಸ್ತಾನಕ್ಕೆ ಜಿಂದಾಬಾದ್ ಘೋಷಣೆ ಕೂಗಿದವರ ವಿರುದ್ಧ ಎಫ್‌ಐಆರ್ ಹಾಕಲು ನಾಲ್ಕು ದಿನ ತೆಗೆದುಕೊಂಡವರು ಶಾಸಕರನ್ನು ಬಂಧಿಸಲು ಬರುತ್ತಾರೆಂದರೆ ಜನಸಾಮಾನ್ಯರು ಬದುಕುವುದು ಹೇಗೆ ಎಂದು ಪ್ರಶ್ನಿಸಿದರು.
ಶಾಸಕ ಹರೀಶ್ ಪೂಂಜ ವಿರುದ್ಧ ಅನಗತ್ಯವಾಗಿ ದುರುzಶಪೂರಿತವಾಗಿ ರಾಜ್ಯ ಸರ್ಕಾರ ಎಫ್‌ಐಆರ್ ದಾಖಲಿಸಿ ಬಂಧನಕ್ಕೆ ಹವಣಿಸುತ್ತಿರುವುದು ಅಧಿಕಾರ ದುರುಪಯೋಗದ ಪರಮಾವಧಿ. ಎಲ್ಲವನ್ನೂ ರಾಜಕೀಯ ದ್ವೇಷದ ಕಣ್ಣಿನಿಂದಲೇ ನೋಡುವ ರಾಜ್ಯ ಸರ್ಕಾರದ ನಿರ್ಧಾರ ಆಘಾತಕಾರಿ. ಕಾನೂನು- ಸುವ್ಯವಸ್ಥೆಗೆ ಧಕ್ಕೆ ತರುವವರ ಮೇಲೆ ಕ್ರಮ ಕೈಗೊಳ್ಳುವಾಗ ಕೈ ಕಟ್ಟಿ ಕುಳಿತುಕೊಳ್ಳುವ ಸರ್ಕಾರ ಶಾಸಕರ ಬಂಧನಕ್ಕೆ ಮುಂದಾಗಿರುವುದನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದು ತಿಳಿಸಿದರು.

ವಿಚಾರಣೆಗೆ ಹಾಜರಾಗಬೇಕು ಎಂದಾಗ ಶಾಸಕರು ಜನ ಸೇರಿಸಿದ್ರು ಸ್ಟೇಷನ್ ಬೈಲ್‌ನಲ್ಲಿ ಬಿಡುಗಡೆ ಮಾಡಿzವೆ: ಎಸ್.ಪಿ. ರಿಷ್ಯಂತ್: ಬೆಳ್ತಂಗಡಿ ಠಾಣಾ ೫೮/೨೦೨೪ ಕಲಂ:೧೪೩, ೧೪೭, ೩೪೧, ೫೦೪, ೫೦೬ ಜೊತೆಗೆ ೧೪೯ ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರನ್ನು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಬಿ.ರಿಷ್ಯಂತ್ ಅವರು ಪೊಲೀಸರು ಹಾಗೂ ಮಾಧ್ಯಮದವರು ಇರುವ ವಾಟ್ಸಪ್ ಗ್ರೂಪ್‌ನಲ್ಲಿ ಮೇ ೨೨ರಂದು ರಾತ್ರಿ ೧೦.೪೩ಕ್ಕೆ ಸಂದೇಶ ರವಾನಿಸಿದ್ದಾರೆ.
ರಾತ್ರಿ ೧೦ ಗಂಟೆಗೆ ಇದೇ ವಾಟ್ಸಪ್ ಗ್ರೂಪ್‌ನಲ್ಲಿ ಸಂದೇಶ ರವಾನಿಸಿದ್ದ ಎಸ್.ಪಿ.ಯವರು ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ೨ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿತರಾದ ಹರೀಶ್ ಪೂಂಜರನ್ನು ವಿಚಾರಣೆಗಾಗಿ ಠಾಣೆಗೆ ಕರೆ ತರಲು ಬೆಳ್ತಂಗಡಿ ಠಾಣಾ ಪೊಲೀಸರು ಸದ್ರಿಯವರ ಮನೆಗೆ ತೆರಳಿರುತ್ತಾರೆ. ಈ ವೇಳೆ ಸ್ಥಳದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ನಳಿನ್ ಕುಮಾರ್ ಕಟೀಲ್‌ರವರು ತಾನೇ ಖುದ್ದಾಗಿ ಹರೀಶ್ ಪೂಂಜಾರನ್ನು ವಿಚಾರಣೆಗೆ ಠಾಣೆಗೆ ಕಳುಹಿಸುವುದಾಗಿ ವಿನಂತಿಸಿಕೊಂಡಿರುತ್ತಾರೆ ಹಾಗೂ ಅದರಂತೆ ಸಂಸದರು ಆರೋಪಿತರಾದ ಹರೀಶ್ ಪೂಂಜಾರನ್ನು ಪೊಲೀಸರೊಂದಿಗೆ ಠಾಣೆಗೆ ಕಳುಹಿಸಿರುತ್ತಾರೆ. ಪ್ರಸ್ತುತ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಪೂಂಜಾರ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದರು.
ಶಾಸಕರ ಮನೆಗೆ ಮೊದಲು ಮೂರೇ ಜನ ಪೊಲೀಸರನ್ನು ಕಳುಹಿಸಿದ್ವಿ. ಅವರನ್ನು ವಿಚಾರಣೆಗೆ ಬರಲು ನೋಟಿಸ್ ನೀಡಲು ಹೋಗಲಾಗಿತ್ತು. ಮೂರು ಜನ ಪೊಲೀಸರು ಹೋಗಿ ವಿಚಾರಣೆಗೆ ಹಾಜರಾಗಬೇಕು ಎಂದಾಗ ಅವರು ಒಳಹೋಗಿ ಜನ ಸೇರಿಸಿದ್ರು. ಲಾ ಆಂಡ್ ಆರ್ಡರ್ ಕಂಟ್ರೋಲ್‌ಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಯಿತು. ಶಾಸಕ ಪೂಂಜಾ ವಿಚಾರಣೆಗೆ ಹೋದಾಗ ವಕೀಲರು ಪೊಲೀಸರಿಗೆ ಬುದ್ಧಿ ಕಲಿಸಿದ್ರು ಅಂತೆಲ್ಲ ಚರ್ಚೆ ಆಗ್ತಿದೆ. ಆ ತರಹ ಏನಿಲ್ಲ. ಹಾಗಂತ ಪೊಲೀಸರು ಅಲ್ಲಿಂದ ಓಡಿ ಹೋಗಿದ್ದಲ್ಲ. ಜನಪ್ರತಿನಿಧಿಯವರು ಮನವಿ ಮಾಡಿಕೊಂಡು ಅಲ್ಲಿ ರೋಡ್ ಕೇವಲ ೨೦ ಅಡಿ ಇದೆ ಜಖಂ ಆಗಿದೆ. ನಾವೇ ಠಾಣೆಗೆ ಕರೆ ತರುತ್ತೇವೆ ಎಂದ ಕಾರಣ ಪೊಲೀಸರು ಹೊರ ಬಂದದ್ದು. ೨೦೦೦ ಜನ ಸೇರಿಸಿದ್ರೆ ವಿಚಾರಣೆ ಮಾಡಬಾರದು, ೫೦೦೦ ಸೇರಿದರೆ ಕೇಸೇ ಮಾಡಬಾರದು ಅಂತ ಇಲ್ವಲ್ಲ. ಕಾನೂವಿಗೆ ಎಲ್ಲರೂ ಒಂದೇ ತಪ್ಪು ಮಾಡಿದರೆ ಕೇಸ್, ವಿಚಾರಣೆ ಎಲ್ಲವೂ ಇರ್ತದೆ ಎಂದು ಎಸ್‌ಪಿ ರಿಷ್ಯಂತ್ ಅವರು ಮೇ ೨೭ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

Exit mobile version