Site icon Suddi Belthangady

ಬೆಳ್ತಂಗಡಿ: ವಿಶ್ವ ತಂಬಾಕು ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ, ಸ್ಪಂದನ ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಮೇ 30ರಂದು ಡಾ‌‌.ಬಿ.ಆರ್.ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ನಡೆಯಿತು.

ಉದ್ಘಾಟನೆಯನ್ನು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶಶಿಧರ ಎಂ ಗೌಡ ಉದ್ಘಾಟನೆಯನ್ನು ನೇರವೇರಿಸಿದರು.ಅಧ್ಯಕ್ಷತೆಯನ್ನು ಕಾರ್ಮಿಕ ನಿರೀಕ್ಷಕರಾದ ಹರೀಶ್ ಎಸ್‌‌.ಎನ್ ವಹಿಸಿಕೊಂಡರು.

ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ವಕೀಲರಾದ ಶಿವಕುಮಾರ್ ಎಸ್.ಎಂ, ಭಾಗವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ್.ಕೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಎಚ್, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ, ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ವಸಂತ ನಡ ಉಪಸ್ಥಿತರಿದ್ದರು.

ಬೆಳ್ತಂಗಡಿ ಹಿರಿಯ ವಕೀಲ ಸಂಪನ್ಮೂಲ ವ್ಯಕ್ತಿ ಶಿವಕುಮಾರ್ ಎಸ್.ಎಂ ವಿಶ್ವ ತಂಬಾಕು ನಿಷೇಧದ ಬಗ್ಗೆ ಕಾನೂನು ಮಾಹಿತಿ ನೀಡಿದರು.

Exit mobile version