ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಮೇ 31ರಂದು ಅದ್ದೂರಿಯಾಗಿ ಆಚರಿಸಲಾಯಿತು.
ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿಗಳು ಹಾಗೂ ಈ ಕ್ಷೇತ್ರದ ಧರ್ಮೋಥಾನಾ ಟ್ರಸ್ಟ್ ನ ಕಾರ್ಯದರ್ಶಿ ವೀರು ಶೆಟ್ಟಿ ಅವರ ಆಗಮಿಸಿದ್ದರು.ಅತಿಥಿಗಳಾಗಿ ಪುದುವೆಟ್ಟು ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಜಿ ಶ್ರೀಧರನ್ ನಾಯರ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್, ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಕ್ಷೇತ್ರದ ವೀರೂ ಶೆಟ್ಟಿ ಅವರು ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆಟಿಕೆ ಸಾಮಾನುಗಳನ್ನು ನೀಡಿ ಶಾಲೆಗೆ ಬರಮಾಡಿಕೊಂಡರು.
ನಂತರ ಶಾಲಾ ಪ್ರಾರಂಭೋತ್ಸವವನ್ನು ವೀರು ಶೆಟ್ಟಿ ಅವರು ತಮ್ಮ ದಿವ್ಯ ಹಸ್ತದಿಂದ ದೀಪ ಪ್ರಜ್ವಲನ ಮಾಡುವುದರ ಮೂಲಕ ನಮ್ಮ ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆಯನ್ನು ನೀಡುವುದರ ಮೂಲಕ ಶಾಲಾ ಪ್ರಾರಂಭೋತ್ಸವವನ್ನು ಉದ್ಘಾಟಿಸಿದರು.ನಂತರ ಮಾತನಾಡಿ ಈ ವರ್ಷ ಎಲ್ಲ ವಿದ್ಯಾರ್ಥಿಗಳು ಶಾಲೆಯಲ್ಲಿ ಉತ್ತಮ ರೀತಿಯಲ್ಲಿ ಕಲಿತು ಶಾಲೆಗೆ ಒಳ್ಳೆಯ ಹೆಸರನ್ನು ತರುವಂತ ವಿದ್ಯಾರ್ಥಿಗಳಾಗಿ ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಶಿಕ್ಷಕರು ಹೇಳಿಕೊಟ್ಟ ಪಾಠ ಪ್ರವಚನಗಳನ್ನು ವಿದ್ಯಾರ್ಥಿ ಪೋಷಕರು ಮನೆಯಲ್ಲಿ ಪುನರಾವರ್ತನೆಗೊಳಿಸಿದಾಗ ಮಗುವಿನ ಕಲಿಕಾ ಮಟ್ಟ ಇನ್ನಷ್ಟು ಹೆಚ್ಚಾಗಲು ಸಾಧ್ಯವಿದೆ. ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಶಾಲೆಗೆ ಬೇಕಾದ ಎಲ್ಲಾ ಮೂಲಭೂತ ಸವಲತ್ತುಗಳನ್ನು ಒದಗಿಸಿಕೊಟ್ಟಿದ್ದಾರೆ.ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿ,ವಿದ್ಯಾರ್ಥಿಗಳು ಪಾಠ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಶಾಲೆಗೆ ಹೆಸರನ್ನು ತರುವಂತ ವಿದ್ಯಾರ್ಥಿಗಳಾಗಿ ಎಂದು ಶುಭ ಹಾರೈಸಿದರು.
ನಂತರ ಮಾತನಾಡಿದ ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಟಿಕ್ಕಾಸಾಹೇಬ್ರವರು ವಿದ್ಯಾರ್ಥಿಗಳೆಲ್ಲರೂ ಕೂಡ ಆಟ ಪಾಠಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಾಲೆಗೆ ಕೀರ್ತಿ ತರುವಂತಹ ವಿದ್ಯಾರ್ಥಿಗಳಾಗಿ ಎಂದು ತಿಳಿಸುವರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ನಿವೃತ್ತ ಮುಖ್ಯ ಶಿಕ್ಷಕ ಜಿ.ಶ್ರೀಧರನ್ ನಾಯರ್ ಅವರು ಶಾಲೆಯ ಮುಂದಿನ ಶೈಕ್ಷಣಿಕ ಚಟುವಟಿಕೆಗಳಿಗೆ ಶುಭ ಹಾರೈಸಿದರು.
ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಈ ಒಂದು ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರು ಸ್ವಾಗತಿಸಿದರು.
ಶಾಲೆಯ ಶಿಕ್ಷಕ ಪವನ್ ಕುಮಾರ್ ಧನ್ಯವಾದಿಸಿ, ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವೀರು ಶೆಟ್ಟಿ ಅವರ ವತಿಯಿಂದ ಎಲ್ಲ ವಿದ್ಯಾರ್ಥಿಗಳಿಗೆ ಸಿಹಿಯನ್ನು ನೀಡಿದರು.
ಆಡಳಿತ ಮಂಡಳಿಯ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿಯನ್ನು ವಿತರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಸುರೇಂದ್ರ ಕುಮಾರ್ ರವರ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿಯನ್ನು ವಿತರಿಸಲಾಯಿತು.