ಉರುವಾಲು ಕಾರಿಂಜ ಬೈತಾರ್ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಸಂಭ್ರಮ

0

ಉರುವಾಲು: ಉರುವಾಲು ಕಾರಿಂಜ ಬೈತಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಮಾಡಲಾಯಿತು.

ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳನ್ನು ಬಲೂನು ಹಾಗೂ ಹೂ ವನ್ನು ನೀಡಿ ಸ್ವಾಗತಿಸಲಾಯಿತು.

ಸರಕಾರದ ಉಚಿತ ಕೊಡುಗೆಯಾದ ಸಮವಸ್ತ್ರ ಹಾಗೂ ಪಠ್ಯ ಪುಸ್ತಕ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಗಿರಿಜ, ಸಹಶಿಕ್ಷಕ ಪರಮೇಶ್ವರ ಎಸ್, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಜಗನ್ನಾಥ ರೈ ನೀನಿ, ಉಪಾಧ್ಯಕ್ಷೆ ಕುಸುಮ, ಅಂಗನವಾಡಿ ಕಾರ್ಯಕರ್ತೆ ಶಶಿಪ್ರಭ, ದಾನಿಗಳಾದ ದಾಸಪ್ಪ ಗೌಡ ಕೋಡಿಯಡ್ಕ, ನಿವೃತ್ತ ಸೈನಿಕ ಜೆ ಕೆ ಪೂಜಾರಿ ಹಾಗೂ ಸಮಿತಿ ಸದಸ್ಯರು ಪೋಷಕರು ಹಾಜರಿದ್ದರು.

LEAVE A REPLY

Please enter your comment!
Please enter your name here