Site icon Suddi Belthangady

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಶಾಲೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ.ಸಿ. ಕಾರ್ಯಧ್ಯಕ್ಷ ಯಶೋಧರ ನಲ್ಲರಬೆಟ್ಟು ಹೂಗುಚ್ಛ ನೀಡಿ ಸ್ವಾಗತಿಸಿ, ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸರಕಾರದಿಂದ ವಿದ್ಯಾರ್ಥಿಗಳಿಗೆ ಸರಬರಾಜಾದ ಪಠ್ಯಪುಸ್ತಕಗಳನ್ನು ಮತ್ತು ಸಮವಸ್ತ್ರವನ್ನು ಶಾಲಾ ಎಸ್.ಡಿ.ಎಂ.ಸಿ ಸದಸ್ಯರು ವಿತರಿಸಿದರು.

ಶಾಲಾ ಮುಖ್ಯ ಶಿಕ್ಷಕ ಶಶಿಧರ್ ಕೆ ಎಲ್ಲರನ್ನು ಸ್ವಾಗತಿಸಿದರು.

2024-25ರ ಶೈಕ್ಷಣಿಕ ಬಲವರ್ಧನೆ ವರ್ಷದ ರೂಪುರೇಷೆಗಳನ್ನು ಪೋಷಕರಿಗೆ ತಿಳಿಯಪಡಿಸಿದರು.

ಶಾಲಾ ಶಿಕ್ಷಕ ದೇವುದಾಸ್ ನಾಯಕ್ ಶಾಲಾ ಶಿಸ್ತು, ಸಮವಸ್ತ್ರ ಮತ್ತು ಹತ್ತನೇ ತರಗತಿಯ ವಿಶೇಷ ತರಗತಿಗಳ ಬಗ್ಗೆ ಮಾಹಿತಿಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ ಶಾಲಾ ಶಿಕ್ಷಕಿ ಹರಿಣಾಕ್ಷಿ ವಂದಿಸಿದರು. ಶಾಲಾ ಶಿಕ್ಷಕಿ ಸೌಮ್ಯ ನಿರೂಪಿಸಿದರು.ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Exit mobile version