Site icon Suddi Belthangady

ನಿಡ್ಲೆ: ಸರ್ಕಾರಿ ಪ್ರೌಢ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ನಿಡ್ಲೆ: ನಿಡ್ಲೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮೇ 31ರಂದು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.

ಹೊಸದಾಗಿ ದಾಖಲಾದ 8ನೇ ತರಗತಿಯ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.ಎಲ್ಲ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.

ಕಳೆದ ಸಾಲಿನಲ್ಲಿ ಉತ್ತೀರ್ಣರಾದ 10ನೇ ತರಗತಿಯ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ನಿವೃತ್ತ ಮುಖ್ಯ ಶಿಕ್ಷಕ ರಾಜಗುರು ಹೆಬ್ಬಾರ್, ಎಸ್ ಡಿ ಎಂ ಸಿ ಅಧ್ಯಕ್ಷ ಪುರುಷೋತ್ತಮ ಗೌಡ ಶುಭ ಹಾರೈಸಿದರು.

ಮುಖ್ಯ ಶಿಕ್ಷಕಿ ಶಾಂತಾ ರವರು ವಿದ್ಯಾರ್ಥಿಗಳನ್ನು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡಿ ಶಾಲೆಯ ನೀತಿ ನಿಯಮಗಳನ್ನು ತಿಳಿಸಿದರು. ಎಸ್ ಡಿ ಎಂ ಸಿ ಸದಸ್ಯರು, ಸಹ ಶಿಕ್ಷಕರು ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶೋಲಿ ಇವರು ಸ್ವಾಗತಿಸಿ, ಶರತ್ ರವರು ವಂದಿಸಿ, ಸುಚಿತ್ರ ಇವರು ನಿರ್ವಹಿಸಿದರು. ಮಧ್ಯಾಹ್ನದ ಊಟಕ್ಕೆ ಸಿಹಿ ಪಾಯಸವನ್ನು ಶ್ರೀ ವಿನಾಯಕ ಜೋಶಿ ಇವರು ನೀಡಿದ್ದರು.

Exit mobile version