Site icon Suddi Belthangady

ಗುರುವಾಯನಕೆರೆ ಮಾನಸಿಕ ಅಸ್ವಸ್ಥೆ ಮೇಲೆ ಸಾಮೂಹಿಕ ಅತ್ಯಾಚಾರ

ಬೆಳ್ತಂಗಡಿ : ಹೆತ್ತ ತಾಯಿಯನ್ನು ಕಳೆದುಕೊಂಡು ತಬ್ಬಲಿಯಾಗಿರುವ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ವಿಕೃತ ಕಾಮುಕರ ಗುಂಪೊಂದು ಸಾಮೂಹಿಕ ಅತ್ಯಾಚಾರವೆಸಗಿರುವ ಹೇಯ ಕೃತ್ಯವೊಂದು ಗುರುವಾಯನಕೆರೆಯ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಬಳಿ ನಡೆದಿದೆ.

ಗುರುವಾಯನಕೆರೆಯ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಬಳಿ ವಿಕೃತ ಕಾಮುಕರಿಂದ ನಿರಂತರ ಸಾಮೂಹಿಕ ಅತ್ಯಾಚಾರಕ್ಕೊಳಗಾಗುತ್ತಿದ್ದ ಮಾನಸಿಕ ಅಸ್ವಸ್ಥೆ ಇದೀಗ ಆರು ತಿಂಗಳ ಗರ್ಭಿಣಿ ಎನ್ನಲಾಗುತ್ತಿದೆ. ಈ ಪ್ರಕರಣವನ್ನು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Exit mobile version