Site icon Suddi Belthangady

ಬಂದಾರು: ಮೈರೋಳ್ತಡ್ಕ ಸ.ಹಿ.ಪ್ರಾ.ಶಾಲೆಯಲ್ಲಿ ಪ್ರಾರಂಭೋತ್ಸವ

ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ ಮೇ 31ರಂದು ಮೈರೋಳ್ತಡ್ಕದಲ್ಲಿ ನಡೆಯಿತು.

ಒಂದನೇ ತರಗತಿ ಸೇರ್ಪಡೆ ವಿದ್ಯಾರ್ಥಿಗಳಿಗೆ ಬ್ಯಾಗ್, ಪುಸ್ತಕ ಹಾಗೂ ಶಾಲೆಯ ಎಲ್ಲಾ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಯಿತು.

ಮಕ್ಕಳಿಗೆ ಬ್ಯಾಗ್, ಪುಸ್ತಕ ವನ್ನು ಊರ ಪರವೂರಿನ ದಾನಿಗಳು ಹಾಗೂ ಹಳೆ ವಿದ್ಯಾರ್ಥಿಗಳ ನೆರವಿನಿಂದ ನೀಡಲಾಯಿತು.

ಮಕ್ಕಳಿಗೆ ನೆರವು ನೀಡಿದ ಸಮಸ್ತರಿಗೂ ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕ ವೃಂದ ಅಭಿನಂದನೆಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ, ಗಣ್ಯರು, ಮುಖ್ಯ್ಯೊಪಾಧ್ಯಾಯರು, ಹಿರಿಯ ವಿದ್ಯಾರ್ಥಿ ವೃಂದ, ದಾನಿಗಳು, ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Exit mobile version