Site icon Suddi Belthangady

ಕೊಡಿಯಾಲಬೈಲು: ಕಾನರ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಕೊಡಿಯಾಲಬೈಲು: ಕಾನರ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವು ಮೇ 31ರಂದು ನಡೆಯಿತು.ವಿದ್ಯಾರ್ಥಿಗಳನ್ನು ಪುಷ್ಪವೃಷ್ಟಿಯ ಮೂಲಕ ಹೊಸ ಶೈಕ್ಷಣಿಕ ವರ್ಷಕ್ಕೆ ಸಂಭ್ರಮದಿಂದ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕ ವರ್ಗ, ಶಾಲಾ ಎಸ್ ಡಿ ಎಂ ಸಿ ಯ ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು ಮತ್ತು ಬಿಸಿಯೂಟದ ಸಿಬ್ಬಂದಿ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕರು ಸ್ವಾಗತಿಸಿದರು. ಮಧ್ಯಾಹ್ನದ ಬಿಸಿ ಊಟದೊಂದಿಗೆ ಸಿಹಿ ವಿತರಿಸಲಾಯಿತು.

Exit mobile version