ಕೊರಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

0

ಗೇರುಕಟ್ಟೆ : ಕೊರಂಜ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮವು ಮೇ 31ರಂದು ಜರುಗಿತು.

ಹೂ ನೀಡಿ, ವಾದ್ಯಗೋಷ್ಟಿಯೊಂದಿಗೆ ಮಕ್ಕಳನ್ನು ಪ್ರೀತಿಯಿಂದ ಆದರಣೀಯವಾಗಿ ಶಾಲೆಗೆ ಬರಮಾಡಿಕೊಳ್ಳಲಾಯಿತು. ಹಾಗೂ ಉಚಿತ ಪಠ್ಯ ಪುಸ್ತಕ , ಸಮವಸ್ತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌.ಡಿ.ಎಂ.ಸಿ ಅಧ್ಯಕ್ಷ ಹರೀಶ್ ಕುಮಾರ್ ಬಿ, ಶಾಲಾ ಮುಖ್ಯೋಪಾಧ್ಯಾಯಿನಿ ಶಾಂತ ಎಸ್, ಶಿಕ್ಷಕ ವೃಂದ , ಎಸ್‌.ಡಿ.ಎಂ.ಸಿ. ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here