Site icon Suddi Belthangady

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೇ 31ರಂದು ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ದೀಪವು ಪ್ರಕಾಶಮಾನವಾಗಿ ಬೆಳಗುವಂತೆ ಮಕ್ಕಳ ಭವಿಷ್ಯವು ಬೆಳಗಲಿ ಎನ್ನುವ ಆಶಯದಿಂದ ಹೊಸ ಶೈಕ್ಷಣಿಕ ವರ್ಷವನ್ನು ದೀಪೋಜ್ವಲನದ ಮೂಲಕ ಪ್ರಾರಂಭಿಸಲಾಯಿತು.

ಶಾಲಾ ಸಂಚಾಲಕರ ಅತೀ ವಂ ಫಾ ವಾಲ್ಟರ್ ಡಿಮೆಲ್ಲೋ ರವರು ಶಾಲೆಗೆ ಹೊಸದಾಗಿ ನೇಮಕಗೊಂಡ ಶಿಕ್ಷಕಿಯರನ್ನು ಸ್ವಾಗತಿಸಿದರು.

ಶಾಲಾ ಮುಖ್ಯೋಪಾಧ್ಯಾಯ ವಂ ಫಾ ಕ್ಲಿಫರ್ಡ್ ಪಿಂಟೋರವರು ಹೊಸ ಶಿಕ್ಷಕಿಯರನ್ನು ಪರಿಚಯಿಸಿದರು.

ಶಿಕ್ಷಕ ವೃಂದದವರು ದೇವಾನುಗ್ರಹಕ್ಕಾಗಿ ಸರ್ವ ಧರ್ಮ ಪ್ರಾರ್ಥನೆಯನ್ನು ನಡೆಸಿಕೊಟ್ಟರು. ವಿದ್ಯಾರ್ಥಿಗಳನ್ನು ಶುಭಾಶಯ ಗೀತೆ ಮತ್ತು ನೃತ್ಯದ ಮೂಲಕ ಸ್ವಾಗತಿಸಿದರು. ಸಹಶಿಕ್ಷಕಿ ಸರಿತಾ ರೊಡ್ರಿಗಸ್ ಕಾರ್ಯಕ್ರಮ ನಿರ್ವಹಿಸಿದರು.

Exit mobile version