ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-2024 ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

0

ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಕೊಣಾಜೆಯಲ್ಲಿ ನಡೆದ ಅರ್ಥಶಾಸ್ತ್ರ ಅಧ್ಯಯನದ ಸ್ನಾತಕೋತ್ತರ ವಿಭಾಗದ WAVES-24 ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಗೈದು, ವೈಯಕ್ತಿಕ ವಿಭಾಗದಲ್ಲಿ ಬಹುಮಾನ ಪಡೆದು, ಚಾಂಪಿಯನ್ ಶಿಪ್ ಪಟ್ಟವನ್ನು ಅಲಂಕರಿಸಿದ್ದಾರೆ.

ಹಸ್ತವಿ ಮತ್ತು ಚಂದನ ಚರ್ಚಾಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಕೀರ್ತನ್ ಮತ್ತು ಜ್ಯೋತಿ ಕೊಲ್ಯಾಜ್ ಮೇಕಿಂಗ್ ನಲ್ಲಿ ಪ್ರಥಮ ಸ್ಥಾನ, ಪ್ರತೀಕ್ಷ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ವಿಜೇತರಿಗೆ ಅಭಿನಂದಿಸಿದರು.

LEAVE A REPLY

Please enter your comment!
Please enter your name here