Site icon Suddi Belthangady

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಬೆಳ್ತಂಗಡಿ: ಜೀವನದಲ್ಲಿ ಉತ್ತಮ ಗುರಿಯನ್ನು ಹೊಂದಿ ಶಿಸ್ತು ಬದ್ಧರಾಗಿ ಮುನ್ನಡೆದಾಗ ಯಶಸ್ಸು ಪಡೆಯಬಹುದು ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಸಮಯ ಪಾಲನೆಗೆ ಆದ್ಯತೆ ಕೊಟ್ಟು, ಆಸಕ್ತಿಯಿಂದ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು ಎಂದರು.

ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.

ಕಾಲೇಜಿನ ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಕಾಲೇಜಿನ ನೀತಿ ನಿಯಮಗಳ ಮಾಹಿತಿ ನೀಡಿದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಹರ್ಷಿತ್ ಕುಮಾರ್ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನ ಕಲಿಕೆಯ ಮಹತ್ವದ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಿ ಯದುಪತಿ ಗೌಡ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.ಉಪನ್ಯಾಸಕ ಸುಧೀರ್ ಕೆ ಎನ್ ಧನ್ಯವಾದವಿತ್ತರು. ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಗಳಾದ ಅನುರಾಧ ಕೆ ರಾವ್ ಮತ್ತು ಬೆಳಿಯಪ್ಪ ಕೆ ಕಾರ್ಯಕ್ರಮ ನಿರೂಪಿಸಿದರು.

Exit mobile version