Site icon Suddi Belthangady

ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: 18ನೇ ಲೋಕಸಭೆಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಎನ್.ಡಿ.ಎ. ಗೆ ಪೂರ್ಣ ಬಹುಮತ ಸಿಕ್ಕಿದ್ದು ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಂತಸ ವ್ಯಕ್ತಪಡಿಸಿದ್ದಾರೆ.

ವಿಪಕ್ಷಗಳ ಬಹುನಿರೀಕ್ಷಿತ ಅಪಪ್ರಚಾರ, ಷಡ್ಯಂತ್ರಗಳ ನಡುವೆಯೂ ಎನ್.ಡಿ.ಎ. ಲೋಕಸಭೆಯ ಮ್ಯಾಜಿಕ್ ಸಂಖ್ಯೆಯನ್ನು ದಾಟಿದೆ. ಬಿಜೆಪಿಯೊಂದಿಗಿನ ಅದರ ಮಿತ್ರಪಕ್ಷಗಳು ಸುಭದ್ರ ಸರಕಾರದ ರಚನೆಗೆ ಸಹಯೋಗ ನೀಡಲಿದ್ದು, ಮುಂದಿನ ಐದು ವರ್ಷಗಳವರೆಗೆ ಮತ್ತೆ ಕಾಂಗ್ರೇಸೇತರ ಸರಕಾರ ಅಧಿಕಾರಕ್ಕೆ ಬರಲಿದೆ.

ರಾಜ್ಯದಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಮಂಗಳೂರು ಲೋಕಸಭಾಕ್ಷೇತ್ರದಲ್ಲಿ ಕ್ಯಾ.ಬೃಜೇಶ್ ಚೌಟ ಅವರು 1.48 ಲಕ್ಷ ಮತಗಳ ಅಂತರದಿಂದ ವಿಜಯಗಳಿಸಿರುವುದಕ್ಕೆ ಅಭಿನಂದನೆಗಳನ್ನು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Exit mobile version