Site icon Suddi Belthangady

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

ಮಚ್ಚಿನ: ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ ಹಿನ್ನೆಲೆ ಮಚ್ಚಿನ ಗ್ರಾಮದಲ್ಲಿ ಬಿಜೆಪಿಯ ಕಾರ್ಯಕರ್ತರಿಂದ ಸಿಹಿ ತಿಂಡಿ ಹಂಚಿ, ಪಟಾಕಿಯೊಂದಿಗೆ ವಿಜಯೋತ್ಸವ ಆಚರಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷೆ ಸೋಮಾವತಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ, ವಸಂತ ಮರಕಡ, ಚಂದ್ರಶೇಖರ್ ಬಿ ಯಸ್ ಹಾಗೂ ಪಂಚಾಯತ್ ಸದಸ್ಯರು, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು

Exit mobile version