Site icon Suddi Belthangady

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕು ಕಾನೂನು ಸೆವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ, ಬೆಳ್ತಂಗಡಿ ಅರಣ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ ಜೂ.05ರಂದು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ನಡೆಯಿತು.

ಬೆಳ್ತಂಗಡಿ ನ್ಯಾಯಾಲಯದ ಪ್ರಧಾನ ಹಿರಿಯ ನ್ಯಾಯಾಧೀಶ, ತಾ.ಕಾ.ಸೇ.ಸಮಿತಿಗಳ ಅಧ್ಯಕ್ಷ ಶಶಿಧರ ಎಂ.ಗೌಡ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.

ಬೆಳ್ತಂಗಡಿ ಪ್ರಾದೇಶಿಕ ವಲಯಾರಣ್ಯಾಧಿಕಾರಿ ಮೋಹನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಹೆಚ್, ತಾ.ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ವಣ್ಯಜೀವಿ ವಲಯಾರಣ್ಯಾಧಿಕಾರಿ ಸ್ವಾತಿ ವಿಶ್ವ ಪರಿಸರ ದಿನಾಚರಣೆಯ ಬಗ್ಗೆ ಮಾತನಾಡಿ ಶುಭ ಹಾರೈಸಿದರು.

ವಕೀಲರ ಸಂಘದ ಕಾರ್ಯದರ್ಶಿ ನವೀನ್.ಬಿ.ಕೆ., ಅಪರ ಸರಕಾರ ವಕೀಲ ಮನೋಹರ್ ಕುಮಾರ್ ಇಳಂತಿಲ, ಉಪವಲಯಾಣ್ಯಾಧಿಕಾರಿಗಳಾದ ರವೀಂದ್ರ ಕೆ, ರಾಘವೇಂದ್ರ, ಮಹೇಶ, ಬೀಟ್ ಅರಣ್ಯಾಧಿಕಾರಿ ಸತೀಶ್, ಸಿಬ್ಬಂಧಿಗಳು, ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು, ನ್ಯಾಯಾಲಯದ ಸಿಬ್ಬಂಧಿಗಳು ಉಪಸ್ಥಿತರಿದ್ದರು.

Exit mobile version