ಉಜಿರೆ: 2024-25ನೇ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಉದ್ಘಾಟನೆ ಹಾಗೂ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಜೂನ್ 2ರಂದು ಅನುಗ್ರಹ ಆಡಿಟೋರಿಯಂನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಅನುಗ್ರಹ ಶಿಕ್ಷಣ ಸಂಸ್ಥೆಗಳ ಸಂಚಾಲಕರದ ವಂ.ಫಾ.ಅಬೇಲ್ ಲೋಬೊ ರವರು ಉದ್ಘಾಟಿಸಿ, ಕಳೆದ ಬಾರಿಯ ಶೇಕಡಾ 100 ಫಲಿತಾಂಶದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಹಾಗೂ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ವಂ.ಫಾ.ವಿಜಯ್ ಲೋಬೋರವರು ಸರ್ವರನ್ನು ಸ್ವಾಗತಿಸಿ, ವಿದ್ಯಾರ್ಥಿಗಳು, ವಿದ್ಯಾರ್ಥಿ ದೆಸೆಯಿಂದಲೇ ಶಿಸ್ತು ಸಂಯಮಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿ ಭವಿಷ್ಯದ ಉತ್ತಮ ಪ್ರಜೆಗಳಾಗಿ ಮೂಡಿಬರಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉಜಿರೆ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಆಂಟೋನಿ ಫೆರ್ನಾಂಡಿಸ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ನೂತನ ಸಂಚಾಲಕರಾಗಿ ಅಧಿಕಾರ ಸ್ವೀಕರಿಸಿದ ವಂ.ಫಾ.ಅಬೇಲ್ ಲೋಬೊ ರವರನ್ನು ಕಾಲೇಜಿನ ಪರವಾಗಿ ಸ್ವಾಗತಿಸಲಾಯಿತು ಹಾಗೂ ಪ್ರಥಮ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳಲ್ಲಿ, ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ಹೆಝಲ್ ಹಾಗೂ ಅಲ್ಬೀನ್ ರವರನ್ನು ಗೌರವಿಸಲಾಯಿತು.
ಅರುಣ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.