ಬಿಜೆಪಿ ಮುಖಂಡ ರಾಜೇಶ್.ಎಮ್.ಕೆ ಮೇಲೆ ಹಲ್ಲೆ ಪ್ರಕರಣ: ಸಂಸದ ಕ್ಯಾ.ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಣೆ

0

ಕಳೆಂಜ: ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್.ಎಮ್.ಕೆ ಮೇಲೆ ಜೂ.4ರಂದು ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿ ನಡೆದಿದ್ದು, ಇದರಲ್ಲಿ ಗಾಯಗೊಂಡ ಮುಖಂಡ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು (ಜೂ.05ರಂದು) ಆಸ್ಪತ್ರೆಗೆ ದ.ಕ ಜಿಲ್ಲೆಯ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಸಂಸದರ ಜೊತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಶಾಂತ್ ಪಾರೆಂಕಿ, ಜಿಲ್ಲಾ ಉಪಾಧ್ಯಕ್ಷ ಸೀತಾರಾಮ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಕಾಂತ್, ಯಶವಂತ್ ಹಾಗೂ ಬಿಜೆಪಿ ಕಾರ್ಯಕರ್ತರು ಜೊತೆಯಲ್ಲಿದ್ದರು‌.

p>

LEAVE A REPLY

Please enter your comment!
Please enter your name here