Site icon Suddi Belthangady

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಆ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳಾದ ಚಿತ್ರಕಲೆ, ಗಿಡಗಳನ್ನು ಗುರುತಿಸುವಿಕೆ, ಪ್ರಬಂಧ ರಚನೆ, ಪತ್ರಲೇಖನ ಇತ್ಯಾದಿಗಳ ಮೂಲಕ ಪರಿಸರ ಪ್ರಜ್ಞೆಯನ್ನು ಮೂಡಿಸಿ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ ಗಿಡ ನೆಡುವುದರ ಮೂಲಕ ಪರಿಸರವನ್ನು ರಕ್ಷಣೆಯನ್ನು ಹಾಗೂ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರವನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Exit mobile version