Site icon Suddi Belthangady

ರಾಜ್ಯ ಮಟ್ಟದ ನೆಟ್ ಬಾಲ್ ಕ್ರೀಡೆ: ಉಜಿರೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಪ್ರಶಾಂತ್ ಗೆ ಚಿನ್ನದ ಪದಕ

ಉಜಿರೆ: ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಪ್ರಶಾಂತ್ 5ನೆಯ ಸೀನಿಯರ್ ರಾಜ್ಯ ಮಟ್ಟದ ನೆಟ್ ಬಾಲ್ ಕ್ರೀಡೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದಿದ್ದಾರೆ.

ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕ ಕರ್ನಾಟಕ ರಾಜ್ಯ ಸರಕಾರದ ಅತ್ಯುನ್ನತ ಕ್ರೀಡಾ ಗೌರವವಾದ ಏಕಲವ್ಯ ಪ್ರಶಸ್ತಿ ಪುರಸ್ಕೃತ ನಿತಿನ್ ಇವರು ತರಬೇತಿ ನೀಡಿರುತ್ತಾರೆ.

ಇವರಿಗೆ ಕಾಲೇಜಿನ ಪ್ರಾಂಶುಪಾಲ ಸಂತೋಷ್, ಮ್ಯಾನೇಜರ್ ಚಂದ್ರನಾಥ ಜೈನ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮಿಥುನ್, ಕ್ರೀಡಾ ವಿಭಾಗದ ಸಂಪತ್ ಹಾಗೂ ಕಾಲೇಜಿನ ಸಿಬ್ಬಂದಿಗಳು ಶುಭ ಕೋರಿದರು.

Exit mobile version