ಪೆರಿಂಜೆ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಪೆರಿಂಜೆ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸ.ಹಿ.ಪ್ರಾ ಶಾಲೆ ಪೆರಿಂಜೆಯಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಮೂಡುಬಿದಿರೆಯ ಎಸ್.ಎನ್.ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಕೃತಿ ಸಮತೋಲನದಲ್ಲಿ ಗಿಡಮರಗಳ ಪಾತ್ರ, ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ಮಕ್ಕಳಿಗೆ ತರಬೇತಿ ನೀಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯ ನೀನಾ ಕುವೆಲ್ಲೋ, ಶಿಕ್ಷಕರು, ಶಾಲಾ ವಿದ್ಯಾರ್ಥಿಗಳು, ಎಸ್.ಎನ್.ಎಂ ಪಾಲಿಟೆಕ್ನಿಕ್ ಕಾಲೇಜು ಮೂಡುಬಿದಿರೆಯ ಎನ್.ಎಸ್.ಎಸ್ ಸ್ವಯಂ ಸೇವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here