Site icon Suddi Belthangady

ಕಾಶಿಪಟ್ಣ: ಸ.ಹಿ.ಪ್ರಾ.ಶಾಲೆಯಲ್ಲಿ ಪರಿಸರ ದಿನಾಚರಣೆ

ಕಾಶಿಪಟ್ಣ: ಸ.ಹಿ.ಪ್ರಾ.ಶಾಲೆಯಲ್ಲಿ ಜೂ.05ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮೂಡಬಿದ್ರೆ ಮಹಾವೀರ ಕಾಲೇಜಿನ ಎಸ್.ಎನ್.ಎಂ.ಪಾಲಿಟೆಕ್ನಿಕ್ ನ ಆರು ಜನ ವಿದ್ಯಾರ್ಥಿಗಳು ಹಾಗೂ ನಾಲ್ಕು ಜನ ಪ್ರಾಚಾರ್ಯರುಗಳು ಭಾಗವಹಿಸಿ ವಿಶ್ವ ಪರಿಸರ ದಿನಾಚರಣೆ ಆಚರಣೆಗೆ ಚಾಲನೆ ನೀಡಿದರು.

ನಂತರ ಶಾಲಾ ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಮರುಬಳಕೆ ಪ್ಲಾಸ್ಟಿಕ್ ಕಡಿಮೆ ಬಳಕೆಯ ಬಗ್ಗೆ ಕಿರು ಪ್ರಹಸನವನ್ನು ನಡೆಸಲಾಯಿತು. ಪರಿಸರ ರಕ್ಷಣೆಯ ಮಹತ್ವವನ್ನು ವಿದ್ಯಾರ್ಥಿಗಳು ವಿವರಿಸಿದರು.

ನಂತರ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರೆಲ್ಲರೂ ವಿವಿಧ ಹಣ್ಣು ತರಕಾರಿಗಳು ಹಾಗೂ ಹೂವಿನ ಗಿಡಗಳನ್ನು ನೆಟ್ಟು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿದರು.

Exit mobile version