Site icon Suddi Belthangady

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾದ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಶಾಲಾ ಸಂಚಾಲಕ ವಂದನೀಯ ಫಾದರ್ ಎಲಿಯಾಸ್ ಡಿಸೋಜರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಯ ಮೂಲಕ ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಶಾಲಾ ಸಂಚಾಲಕ ವಂದನೀಯ ಫಾದರ್ ಎಲಿಯಾಸ್ ಡಿಸೋಜರವರು ಮಾತನಾಡಿ, ದಿನದಿಂದ ದಿನಕ್ಕೆ ಜಾಗತಿಕ ತಾಪಮಾನ ಹೆಚ್ಚಾಗುತ್ತಿರುವುದರಿಂದ ಪರಿಸರವನ್ನು ಉಳಿಸಿ ಬೆಳೆಸಬೇಕೆಂಬ ಸಂದೇಶವನ್ನು ನೀಡಿದರು.

ಮುಖ್ಯ ಶಿಕ್ಷಕ ನೋರ್ಬರ್ಟ್ ವಿನ್ಸೆಂಟ್ ಪೌಲ್ ರವರು ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿದರು.ಸಹ ಶಿಕ್ಷಕರು ಕಾರ್ಯಕ್ರಮಕ್ಕೆ ಸಹಕರಿಸಿದರು.

ಹತ್ತನೇ ತರಗತಿಯ ವಿದ್ಯಾರ್ಥಿನಿ ವಿಯೋಲ ಡೆಲಿಶಾ ಅಂದ್ರಾದೆ ಕಾರ್ಯಕ್ರಮವನ್ನು ನಿರೂಪಿಸಿ, ವಂಶಿತಾ ಸ್ವಾಗತಿಸಿ, ಡಿಯೋನ ಪರ್ಲ್ ವಂದಿಸಿದರು.

ಶಾಲಾ ಸಂಚಾಲಕ ವಂದನೀಯ ಫಾದರ್ ಎಲಿಯಾಸ್ ಡಿಸೋಜರವರು, ಮುಖ್ಯ ಶಿಕ್ಷಕರು ನೋರ್ಬರ್ಟ್ ವಿನ್ಸೆಂಟ್ ಪೌಲ್, ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಸೇರಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Exit mobile version