

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸೈಯ್ಯದ್ ಹಬೀಬ್ ವಹಿಸಿಕೊಂಡಿದ್ದರು.
ಶಾಲಾ ಮುಖ್ಯಪಾದ್ಯಾಯನಿ ಜಾಕಿನ್ ಬಿನ್ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಅಧ್ಯಕ್ಷೀಯ ಮಾತುಗಳನ್ನಾಡಿದ ಶ್ರೀಯುತ ಜನಾಬ್ ಸೈಯದ್ ಹಬೀಬ್ ಇವರು “ನಾವು ನಮ್ಮ ಭವಿಷ್ಯದ ಉಳಿವಿಗಾಗಿ ಪರಿಸರವನ್ನು ರಕ್ಷಿಸಬೇಕು. ಗಿಡ ನೆಟ್ಟು ಅದನ್ನು ಪೋಷಿಸುವ ಜವಾಬ್ದಾರಿಯನ್ನು ನಿರ್ವಹಿಸಬೇಕು” ಎಂದರು.
ಶಾಲಾ ವಿದ್ಯಾರ್ಥಿಗಳು ಛದ್ಮ ವೇಷದ ಮೂಲಕ ಪರಿಸರ ಜಾಗೃತಿಯನ್ನು ಮೂಡಿಸಿದರು.
ಅತಿಥಿಗಳು ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಜೊತೆ ಸೇರಿ ಗಿಡ ನೆಟ್ಟು ಅದಕ್ಕೆ ನೀರುಣಿಸುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳು ಸುಮಾರು 50ಕ್ಕೂ ಹೆಚ್ಚು ಗಿಡಗಳನ್ನು ತಾವೇ ತಂದು ಅದನ್ನು ನೆಟ್ಟು ಪೋಷಿಸುವ ಪ್ರತಿಜ್ಞೆಯನ್ನು ಕೈಗೊಂಡರು.
ಶಾಲಾ ಸಹ ಶಿಕ್ಷಕಿ ಸುಶ್ಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು. ಸಹಶಿಕ್ಷಕಿ ಆಯಿಷಾ ವಂದನಾರ್ಪಣಾ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.