Site icon Suddi Belthangady

ಜೂನ್ 12: ಬೆಳ್ತಂಗಡಿಯಲ್ಲಿ‌ ಲೋಕಾಯುಕ್ತ ಜನಸಂಪರ್ಕ ಸಭೆ

ಬೆಳ್ತಂಗಡಿ: ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜೂನ್ 12ರಂದು ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ ಭರ್ತಿ ಮಾಡಿ ಅಫಿದವಿತ್ ಮಾಡಿಸಿದ ದೂರು ಅರ್ಜಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಸ್ವೀಕರಿಸಲಿದ್ದಾರೆ.

ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರು ದೂರು ನೀಡಬಹುದಾಗಿದೆ.‌

ಜೂ.‌12ರಂದು ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ತಾಲೂಕು ಕಚೇರಿಗೆ ಭೇಟಿ ನೀಡಲಿರುವ ಲೋಕಾಯುಕ್ತ ಅಧಿಕಾರಿಗಳು ಲೋಕಾಯುಕ್ತ ಜನ ಸಂಪರ್ಕ ಸಭೆ ನಡೆಸಲಿದ್ದಾರೆ. ಇದಲ್ಲದೆ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ.

ಅರ್ಜಿದಾರರು ನಮೂನೆ 1 & IIರಲ್ಲಿ ಭರ್ತಿ ಮಾಡಿ ಅಫಿದವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್. ಅಂಬೇಡ್ಕರ್ ವೀದಿ ಬೆಂಗಳೂರು-560001 ರವರಿಗೆ ಸಲ್ಲಿಸಬಹುದು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

Exit mobile version