ಪಿಲ್ಯ: ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

0

ಪಿಲ್ಯ: ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು.

ಶಾಲಾ ಆವರಣವನ್ನು ಬಲೂನ್ ಮತ್ತು ಬಣ್ಣ ಕಾಗದಗಳಿಂದ ಅಲಂಕರಿಸಿ ಬ್ಯಾಂಡ್ ವಾಲಗದೊಂದಿಗೆ ಮಕ್ಕಳಿಗೆ ಪೆನ್ನು, ಪೆನ್ಸಿಲ್ ನೀಡಿ ಶಾಲೆಗೆ ಸ್ವಾಗತಿಸಲಾಯಿತು.

ಶಾಲಾ ಸಂಚಾಲಕ ನಸೀರ್ ಅಹಮದ್ ಖಾನ್ ರವರು ಪ್ರಾಸ್ತಾವಿಕ ಮಾತಿನೊಂದಿಗೆ ಮಕ್ಕಳ ಜೊತೆ ಸೇರಿ ರಿಬ್ಬನ್ ಕತ್ತರಿಸುವ ಮೂಲಕ ಶಾಲಾ ಪ್ರಾರಂಭೋತ್ಸವವನ್ನು ಉದ್ಘಾಟಿಸಿದರು.ಸಿಹಿ ತಿಂಡಿ ನೀಡುವ ಮೂಲಕ ನೂತನ ಶೈಕ್ಷಣಿಕ ವರ್ಷಕ್ಕೆ ಶುಭಹಾರೈಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕವೃಂದದವರು ಸಂಭ್ರಮದಿಂದ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here