Site icon Suddi Belthangady

ಪಿಲ್ಯ: ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪಿಲ್ಯ: ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂನ್ 05ರಂದು ವಿಶ್ವ ಪರಿಸರ ದಿನಾಚರಣೆಯನ್ನು ಶಾಲಾ ಸಂಚಾಲಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಗಿಡ ನೆಟ್ಟು ನೀರುಣಿಸುವ ಮೂಲಕ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ನಸೀರ್ ಅಹಮದ್ ಖಾನ್ ರವರು ಪರಿಸರ ರಕ್ಷಣೆ ಬಗ್ಗೆ ಮಾಹಿತಿ ನೀಡಿ ಪರಿಸರವನ್ನು ರಕ್ಷಿಸುವುದು ನಮ್ಮ ಜವಾಬ್ದಾರಿ ಎಂದರು.

ಪರಿಸರ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ಚಿತ್ರ ಕಲೆ, ಎಲೆ ಗುರುತಿಸುವಿಕೆ, ಪ್ರಬಂಧ ಮುಂತಾದ ಚಟುವಟಿಕೆಗಳನ್ನು ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಿಕ್ಷಕ -ರಕ್ಷಕ ಸಂಘದ ಸದಸ್ಯರಾದ ಧನಕೀರ್ತಿ ಜೈನ್ , ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Exit mobile version