Site icon Suddi Belthangady

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಮಾಹಿತಿ ಕಾರ್ಯಗಾರ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಿವಿಧ ಇಲಾಖೆಗಳಲ್ಲಿರುವ ಸರಕಾರಿ ಹುದ್ದೆಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಗಾರವನ್ನು ಜೂ.07ರಂದು ನಡೆಸಲಾಯಿತು.

ಉಳಿ ಅಂಚೆ ಕಛೇರಿಯಲ್ಲಿ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಮಲ್ಲಿನಾಥ್ ಇವರು ವಿವಿಧ ಸರಕಾರಿ ಹುದ್ದೆಗಳು ಹಾಗೂ ಸರಕಾರಿ ಹುದ್ದೆಗಳನ್ನು ಪಡೆಯಲು ಇರುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಉತ್ತಮವಾದ ಮಾಹಿತಿ ನೀಡಿದರು.

ಕಾಲೇಜು ಪ್ರಾಂಶುಪಾಲ ಜೊಸ್ಟನ್ ಲೋಬೋ, ಸಂಯೋಜಕ ಯಶವಂತ್ ಜಿ ನಾಯಕ್, ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೀಕ್ಷಿತ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Exit mobile version