ಬೆಳ್ತಂಗಡಿ: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ಎಸ್.ಟಿ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಬೆಳ್ತಂಗಡಿ ಮಂಡಲದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಎಂ.ಕೆ ಮೇಲೆ ಅದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಎಸ್.ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜಾತ್ರೆ, ಜಿಲ್ಲಾ ಪ್ರದಾನ ಕಾರ್ಯದರ್ಶಿ, ವಿವಿಧ ಮಂಡಲಗಳ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ತಾರ ಅರುಣ್ ಶೇಟ್, ಲ್ಯಾಮ್ಸ್ ಅಧ್ಯಕ್ಷ ಲಿಂಗಪ್ಪ ನಾಯ್ಕ ಬೆಳ್ತಂಗಡಿ ಮತ್ತು ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಉಪಸ್ಥಿತರಿದ್ದರು.