Site icon Suddi Belthangady

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

ನಾರಾವಿ: “ಪದವಿಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಯಲ್ಲಿ ತುಂಬಾ ಮುಖ್ಯವಾದ ಹಂತ. ಶಿಕ್ಷಣದೊಂದಿಗೆ ಜೀವನಶಿಕ್ಷಣ ಹಾಗೂ ಜೀವನ ಮೌಲ್ಯಗಳನ್ನು ನಮ್ಮ ಶಿಕ್ಷಣ ಸಂಸ್ಥೆ ನೀಡುತ್ತಿದೆ. ನೈತಿಕತೆ ಮತ್ತು ಸಂಸ್ಕಾರ ವಿದ್ಯಾರ್ಥಿಗಳಲ್ಲಿ ಆತ್ಮಶಕ್ತಿ ನೀಡುತ್ತದೆ” ಎಂದು ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ.ಡಾ.ಆಲ್ವಿನ್ ಸೆರಾವೋ ಹೇಳಿದರು.

ಅವರು ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆದ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮದಲ್ಲಿ ಮಾತಾಡಿದರು.ಕನ್ನಡ ಉಪನ್ಯಾಸಕ ದಿನೇಶ್ ಬಿ ಕೆ ಬಳಂಜ ಇವರು ಮಾತನಾಡಿ ಶುಭಹಾರೈಸಿದರು.ವೇದಿಕೆಯಲ್ಲಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.

ಗಣಿತಶಾಸ್ತ್ರದ ಉಪನ್ಯಾಸಕ ಸಂತೋಷ್ ಸಲ್ಡಾನ ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕರು ಮತ್ತು ಉಪಪ್ರಾಂಶುಪಾಲ ರಿಚರ್ಡ್ ಮೋರಸ್ ಧನ್ಯವಾದವಿತ್ತರು. ಹಾಗೇ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಕು.ಅಶ್ವಿತಾ ಸೆರಾವೋ ಕಾರ್ಯಕ್ರಮವನ್ನು ನಿರೂಪಿಸಿದರು.

Exit mobile version