ಶ್ರೀ ಕ್ಷೇ.ಧ.ಗ್ರಾ.ಯೋ.ಕಾರ್ಯನಿರ್ವಾಹಕ ನಿರ್ದೇಶಕರಾಗಿ ಅನಿಲ್ ಕುಮಾರ್

0

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಅನಿಲ್ ಕುಮಾರ್ ಜೂ.1ರಂದು ಅಧಿಕಾರ ಸ್ವೀಕರಿಸಿದ್ದಾರೆ.
ಮೂಲತಃ ಚಿಕ್ಕಮಗಳೂರು ಜಿಯ ಕೊಪ್ಪ ತಾಲೂಕಿನ ಹರಿಹರಪುರ ಗ್ರಾಮದವರಾದ ಅನಿಲ್ ಕುಮಾರ್ ಎಸ್. ಎಸ್. ರವರು 2006ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಬಿ.ಎ. ಪದವಿ ಪಡೆದು ಬಳಿಕ ಸುಮಾರು 13 ವರ್ಷ ವಿಜಯ ಬ್ಯಾಂಕ್‌ನಲ್ಲಿ ಬ್ಯಾಂಕಿನ ಕೇಂದ್ರ ಕಛೇರಿ, ಪ್ರಾದೇಶಿಕ ಕಛೇರಿ ಹಾಗೂ ಬ್ರಾಂಚ್‌ಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಹಾಗೂ ಮಾನವ ಸಂಪನ್ಮೂಲ, ತಂತ್ರeನ ಹಾಗೂ ರೀಟೇಲ್ ಬಾಂಕಿಂಗ್‌ನಲ್ಲಿ ವಿಶೇಷ ಅನುಭವ ಹೊಂದಿದ್ದಾರೆ. ಇವರು ರಾಷ್ಟ್ರೀಯ, ಅಂತರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸಿ, ವಿಷಯ ಮಂಡಿಸಿದ್ದಾರೆ.
ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 2020ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಯೋಜನೆಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಡಾ| ಎಲ.ಎಚ್. ಮಂಜುನಾಥ್‌ರವರ ಮಾರ್ಗದರ್ಶನದಲ್ಲಿ ಯೋಜನೆಯ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅತ್ಯಾಧುನಿಕ ತಂತ್ರeನಗಳನ್ನು ಯೋಜನೆಯ ಕಾರ್ಯಕ್ರಮಗಳಲ್ಲಿ ಅಳವಡಿಸಲು ವಿಶೇಷವಾಗಿ ತೊಡಗಿಸಿಕೊಂಡಿರುವುದು ಹಾಗೂ ವಿನೂತನ ವ್ಯವಸ್ಥೆಗಳನ್ನು ಜಾರಿ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
2024ರ ಜೂ.1ರಿಂದಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಹಕ ನಿರ್ದೇಶಕರಾಗಿ ಜವಾಬ್ದಾರಿ ಸ್ವೀಕರಿಸಿzರೆ.

p>

LEAVE A REPLY

Please enter your comment!
Please enter your name here