ಬೆಳ್ತಂಗಡಿ: ಹುಬ್ಬಳ್ಳಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ನೇಹಾರವರ ಕೊಲೆ ಖಂಡಿಸಿ ಉಜಿರೆಯಲ್ಲಿ ಪ್ರತಿಭಟನೆ ನಡೆಸಿದ್ದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮುಖಂಡರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣಕ್ಕಾಗಿ ಲೋಕಸಭಾ ಚುನಾವಣಾ ಕಾರ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ಫ್ಲೈಯಿಂಗ್ ಸ್ಕ್ಯಾಡ್ ಅಧಿಕಾರಿಗಳು ನೀಡಿದ್ದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿದ್ಯಾರ್ಥಿ ಮುಖಂಡರಿಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ಜಾರಿ ಮಾಡಿದ್ದಾರೆ.
p>