Site icon Suddi Belthangady

ಪೆರಿಂಜೆ: ಶ್ರೀ ಧ.ಮಂ.ಅ.ಪ್ರೌ.ಶಾಲೆಗೆ ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ವತಿಯಿಂದ ಉಚಿತ ಪುಸ್ತಕ ವಿತರಣೆ

ಪೆರಿಂಜೆ: ಶ್ರೀ ಧರ್ಮಸ್ಥಳ ಮಂಜನಾಥೇಶ್ವರ ಅನುದಾನಿತ ಪ್ರೌಡಶಾಲೆಗೆ ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ವತಿಯಿಂದ ಕ್ಷೇತ್ರದ ಧರ್ಮದರ್ಶಿ ಜೀವಂದರ ಕುಮಾರ್ ರವರು ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ನೀಡುವ ಕಾರ್ಯಕ್ರಮ ಜೂ.8ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ನೂತನವಾಗಿ ನಿಯೋಜನೆಗೊಂಡ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯ ಕುಮಾರ್ ಜೈನ್, ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ ಹೆಗ್ಡೆ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಕರುಣಾಕರ ಪೂಜಾರಿ ಹಾಗು ಉಪಾಧ್ಯಕ್ಷೆ ಜಾನಕಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯ ಮುಕುಂದ ಚಂದ್ರ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕ ಹರಿಪ್ರಸಾದ್ ಸ್ವಾಗತಿಸಿ, ಶಿಕ್ಷಕ ರಾಜೇಂದ್ರ ಬಲ್ಲಾಳ್ ಧನ್ಯವಾದವಿತ್ತರು.ಶಿಕ್ಷಕಿ ಜಯಂತಿ ಕಾರ್ಯಕ್ರಮ ನಿರೂಪಿಸಿದರು.

Exit mobile version