Site icon Suddi Belthangady

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

ಬೆಳ್ತಂಗಡಿ: ವಿದ್ಯಾರ್ಥಿಗಳು ಕಲಿಕೆಯ ಜತೆ ಶಿಸ್ತಿನ ಬದುಕನ್ನು ಬೆಳೆಸಿಕೊಳ್ಳಬೇಕು. ಕಾಲೇಜಿನಲ್ಲಿರುವ ನಿಯಮಗಳು ವಿದ್ಯಾರ್ಥಿಗಳಿಗೆ ಹೊರೆಯಾಗುವುದಿಲ್ಲ. ಬದಲಾಗಿ ಅವರ ಭವಿಷ್ಯದ ಉತ್ತಮ ಬದುಕಿಗೆ ಪೂರಕವಾಗಿದೆ’ ಎಂದು ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ಆಡಳಿತ ಮಂಡಳಿ ಸದಸ್ಯೆ ಪ್ರೀತಿತಾ ಧರ್ಮವಿಜೇತ್ ಹೇಳಿದರು.

ಅವರು ಜೂ 8ರಂದು ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ನಡೆದ ಓರಿಯೆಂಟೇಶನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ವಿದ್ಯಾರ್ಥಿ ದೆಸೆಯಲ್ಲಿ ಮನಸ್ಸು ವಿದ್ಯಾರ್ಜನೆ ಕಡೆಗೆ ಮಾತ್ರ ಕೇಂದ್ರೀಕೃತವಾಗಬೇಕು. ಉತ್ತಮ ಸಹವಾಸ ಮತ್ತು ಸದ್ವಿಚಾರ ಬೆಳೆಸಿಕೊಳ್ಳಬೇಕು. ಹೆತ್ತವರು ಕಾಲೇಜಿಗೆ ಭೇಟಿ ನೀಡಿ ಅಥವಾ ಫೋನ್ ಮಾಡಿ ತನ್ನ ಮಕ್ಕಳ ಬಗ್ಗೆ ವಿಚಾರಿಸುವ ಜತೆಗೆ ಅವರ ಚಲನವಲನದ ಬಗೆಗೆ ಗಮನಿಸಬೇಕು’ ಎಂದರು.

ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ. ಕಾಲೇಜಿನಲ್ಲಿರುವ ಸೌಲಭ್ಯ ಹಾಗೂ ಅವಕಾಶಗಳ ಬಗೆಗೆ, ಉಪ ಪ್ರಾಂಶುಪಾಲ ಶಮೀವುಲ್ಲಾ ಬಿ.ಎ. ಕಾಲೇಜಿನ ನೀತಿ ನಿಯಮಗಳ ಬಗೆ ಗೆ ಮಾಹಿತಿ ನೀಡಿದರು.

ವಿದ್ಯಾರ್ಥಿಗಳ ಹೆತ್ತವರ ಪರವಾಗಿ ಸುರೇಶ್ ಅನಿಸಿಕೆ ವ್ಯಕ್ತಪಡಿಸಿದರು.

ಕನ್ನಡ ವಿಭಾಗದ ಉಪನ್ಯಾಸಕ ಗಣೇಶ್ ಬಿ ಶಿರ್ಲಾಲು ಸ್ವಾಗತಿಸಿದರು. ಇತಿಹಾಸ ವಿಭಾಗದ ಉಪನ್ಯಾಸಕ ಹರೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ರಾಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕಿ ಅಶ್ವಿನಿ ವಂದಿಸಿದರು.

Exit mobile version