Site icon Suddi Belthangady

ಬೆಳಾಲು: ಪ್ರೌಢಶಾಲೆಯಲ್ಲಿ ಅಕ್ಷರ ದಾಸೋಹ ನಿವೃತ್ತ ಸಿಬ್ಬಂದಿ ಶಾರದಾರವರಿಗೆ ಸನ್ಮಾನ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕಳೆದ ಹನ್ನೆರಡು ವರ್ಷಗಳಿಂದ ಅಕ್ಷರ ದಾಸೋಹ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಾರದಾ ಅವರಿಗೆ ವಿದಾಯಕೂಟದೊಂದಿಗೆ ಸನ್ಮಾನ ಕಾರ್ಯಕ್ರಮ ಶಾಲೆಯಲ್ಲಿ ಜೂ.8ರಂದು ಜರಗಿತು.

ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಆಗಮಿಸಿದ ಬೆಳಾಲು ಗ್ರಾಮ ಪಂಚಾಯತ್ತಿನ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ಸನ್ಮಾನ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶೇಖರ ಗೌಡ ಕೊಲ್ಲಿಮಾರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ ಕನಿಕ್ಕಿಲ, ಪಂಚಾಯತ್ ಗ್ರಂಥ ಪಾಲಕರಾದ ಡೀಕಯ್ಯ ಗೌಡ ಅರಣೆಮಾರು, ಹಳೆ ವಿದ್ಯಾರ್ಥಿ ಕು. ವಂದನಾ ಭಟ್ ಪರಂಗಜೆ, ಶಾಲಾ ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version